Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ: ಡಿಕೆಶಿ ಮಾರ್ಮಿಕ ಪೋಸ್ಟ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಎಕ್ಸ್‌ನಲ್ಲಿ ಮಾಡಿರುವ ಮಾರ್ಮಿಕ ಪೋಸ್ಟ್ ಗಮನ ಸೆಳೆದಿದೆ.

ರಾಹುಲ್ ಗಾಂಧಿಯವರ ಜತೆಗೆ
ಪ್ರತ್ಯೇಕವಾಗಿ ಮಾತನಾಡಿದ ವಿಡಿಯೊ ಹಾಗೂ ಫೋಟೊಗಳು ಶಿವಕುಮಾರ್ ಅವರ ಚಟುವಟಿಕೆಗಳನ್ನು ಪ್ರಸಾರ ಮಾಡುವ ವಾಟ್ಸ್ ಆ್ಯಪ್ ಗುಂಪುಗಳಲ್ಲಿ ಹರಿದಾಡಿದವು.

ಡಿಸೆಂಬರ್ 13ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿ ಬಳಿಕ 'ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ' ಎಂದು ಡಿ.ಕೆ. ಶಿವಕುಮಾ‌ರ್ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮಂಗಳವಾರ ಸಂಜೆ 5.15ರ ಸುಮಾರಿಗೆ ತಮಿಳುನಾಡಿನ ಗೂಡಲೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ವಾಪಸಾದ ರಾಹುಲ್ ಅವರನ್ನು ಸಿದ್ದರಾಮಯ್ಯ, ಶಿವಕುಮಾರ್ ಭೇಟಿಯಾಗಿದ್ದರು.

ಏಕಕಾಲಕ್ಕೆ ಇಬ್ಬರನ್ನು ಎದುರುಗೊಂಡ ರಾಹುಲ್‌ ಅವರು, ಸಿದ್ದರಾಮಯ್ಯನವರ ಜತೆ ಮಾತನಾಡುತ್ತಲೇ, ಶಿವಕುಮಾ‌ರ್ ಅವರಿಂದ ಕೊಂಚ ದೂರ ಕರೆದೊಯ್ದರು. ಅವರೊಂದಿಗೆ ಕೆಲಕ್ಷಣ ಮಾತನಾಡಿದರು. ಅದಾದ ಬಳಿಕ, ಶಿವಕುಮಾ‌ರ್ ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋದ ರಾಹುಲ್, ಅವರೊಂದಿಗೂ ಕೆಲ ಕ್ಷಣ ಮಾತನಾಡಿದರು. ಸೌಜನ್ಯದ ಭೇಟಿಯ ವೇಳೆ, 'ದೆಹಲಿಗೆ ಬನ್ನಿ, ಚರ್ಚಿಸೋಣ' ಎಂದು ರಾಹುಲ್ ಅವರು ಇಬ್ಬರು ನಾಯಕರಿಗೆ ಹೇಳಿದ್ದಾಗಿ ಗೊತ್ತಾಗಿದೆ.

ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್:

“ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

"ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ? ನೀವುಗಳು ನಿಮಗೆ ಇಚ್ಛೆ ಬಂದಂತೆ ಗೊಂದಲ ಸೃಷ್ಟಿಸಿಕೊಳ್ಳುತ್ತಿದ್ದೀರಿ. ನಾವು ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನೂ ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ಇದನ್ನೇ ಮುಂದುವರಿಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ. ನರೇಗಾ ವಿಚಾರವಾಗಿ ನಾವು ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ರಾಜಕಾರಣ ಚರ್ಚೆ ಮಾಡಿದ್ದೇವೆ.

"ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ" ಎಂಬ ಟ್ವೀಟ್ ವಿಚಾರವಾಗಿ ಕೇಳಿದಾಗ, “ನಾನು ಹೊಸದಾಗಿ ಈ ಮಾತನ್ನು ಹೇಳುತ್ತಿಲ್ಲ. ಒಕ್ಕಲಿಗ ಉದ್ಯಮಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ನಾನು ಅಲ್ಲಿನ ಉದ್ಯಮಿಗಳ ಜೊತೆ ನನ್ನ ಅನುಭವದ ಮಾತುಗಳನ್ನು ಹೇಳಿಕೊಂಡಿದ್ದೇನೆ” ಎಂದರು.

ದೆಹಲಿಗೆ ತೆರಳುತ್ತಿದ್ದೀರಾ ಎಂದು ಕೇಳಿದಾಗ, “16 ರಂದು ದೆಹಲಿಗೆ ತೆರಳುತ್ತಿದ್ದೇನೆ” ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ