Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಸ್ತೆ ಅಪಘಾತ: ಮಾಜಿ ಸಚಿವ ರಾಜು ಗೌಡ ಪ್ರಾಣಾಪಾಯದಿಂದ ಪಾರು

ಯಾದಗಿರಿ: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿಕೊಂಡು ಹೈದ್ರಾಬಾದ್‌ನಿಂದ ಯಾದಗಿರಿ ಮೂಲಕ ತಮ್ಮ ಊರಿಗೆ ತೆರಳುತ್ತಿದ್ದ ಮಾಜಿ ಸಚಿವ ರಾಜು ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೊಳಗಾದ ಘಟನೆ ಕಳೆದ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಅದೃಷ್ಟವಶಾತ್, ಅಪಘಾತದಲ್ಲಿ ರಾಜು ಗೌಡ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಶಾಖಪಟ್ಟಣದಿಂದ ಸಿಸಿಎಲ್ ಪಂದ್ಯದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಯಾದಗಿರಿ ನಗರದ ಗಂಜ್ ಪ್ರದೇಶದ ಹೈವೈ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ರಾಜು ಗೌಡ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಒಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಕಾರು ತಿರುಗಿಬಿದ್ದಿದೆ ಎನ್ನಲಾಗಿದೆ.

ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜು ನುಗ್ಗಾಗಿ ಹಾನಿಗೊಳಗಾಗಿದೆ. ಕಾರಿನ ಸ್ಥಿತಿ ಕಂಡ ಸ್ಥಳೀಯರು ಕೆಲ ಕ್ಷಣ ಆತಂಕಗೊಂಡರೂ, ರಾಜು ಗೌಡ ಅವರು ಗಂಭೀರ ಗಾಯಗಳಿಂದ ಪಾರಾಗಿರುವುದು ನಿಟ್ಟುಸಿರು ಬಿಡುವಂತಾಗಿದೆ. ಅವರಿಗೆ ಅಲ್ಪಸ್ವಲ್ಪ ತರಚಿದ ಗಾಯಗಳಾಗಿದ್ದು, ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಪ್ರಥಮ ಚಿಕಿತ್ಸೆ ಪಡೆದುಕೊಂಡ ಬಳಿಕ ರಾಜು ಗೌಡ ಅವರು ಮನೆಗೆ ವಾಪಸ್ಸಾಗಿದ್ದು, ಪ್ರಸ್ತುತ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ಕುಟುಂಬದವರು ಹಾಗೂ ಆಪ್ತ ವಲಯದಿಂದ ಮಾಹಿತಿ ಲಭ್ಯವಾಗಿದೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಅವರ ಬೆಂಬಲಿಗರು, ಸ್ನೇಹಿತರು ಹಾಗೂ ರಾಜಕೀಯ ವಲಯದ ಮುಖಂಡರು ಆತಂಕ ವ್ಯಕ್ತಪಡಿಸಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ಅಪಘಾತದಿಂದಾಗಿ ದೊಡ್ಡ ಅನಾಹುತ ತಪ್ಪಿದ್ದು, ಅಭಿಮಾನಿಗಳು ಹಾಗೂ ಬೆಂಬಲಿಗರು ದೇವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಟ್ರಕ್ ಚಾಲಕನ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ