Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ 18 ರೌಡಿಶೀಟರ್ ಗಳ ಗಡಿಪಾರು

ಬೆಳಗಾವಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್ ಕಾರ್ಯಾಚರಣೆ ನಡೆಸಿದ್ದು, ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿದ್ದ ಒಟ್ಟು 18 ಮಂದಿ ರೌಡಿಶೀಟರ್‌ಗಳನ್ನು ಜಿಲ್ಲೆಯಿಂದ ಗಡೀಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಗಡೀಪಾರಾದ 18 ಜನ ರೌಡಿಶೀಟರ್‌ಗಳು: ಗೋಕಾಕ ತಾಲ್ಲೂಕಿನಲ್ಲಿ ಗಂಗಪ್ಪ ನಾಯಿಕ, ಸಂಜು ಮೇಸ್ತ್ರಿ, ಸಾಗರ ಖಾನಾಪುರ, ಪಾಸ್ಕಲ್ ಮುತ್ತುಸ್ವಾಮಿ, ಕುಲಗೋಡ ಠಾಣೆ ವ್ಯಾಪ್ತಿಯಲ್ಲಿ ದಸ್ತಗೀರಸಾಬ್ ನಾವಲಗಿ, ಮುರಗೋಡ ಠಾಣೆ ವ್ಯಾಪ್ತಿಯಲ್ಲಿ ಹನುಮಂತ ಮಾದರ, ನೀಲಕಂಠ ಮಣವಾಡಕರ, ನಿಪ್ಪಾಣಿ ತಾಲ್ಲೂಕಿನಲ್ಲಿ ಸೈಫ್‌ಅಲಿ ನಾಗರ್ಜಿ, ಪ್ರವೀಣ ಚೌಗಲೆ, ಚಂದ್ರಕಾಂತ 9 ವಡ್ಡರ, ಸಂಕೇಶ್ವರದಲ್ಲಿ ಸಚಿನ ಚೌಡಕ್ಕನವರ, ಯಮಕನಮರಡಿ ಠಾಣೆ ವ್ಯಾಪ್ತಿಯಲ್ಲಿ ಲಾಡಜಿಸಾಬ್ ಮುಲ್ತಾನಿ, ಪಾರೇಶ ನಾಶಿಪುಡಿ, ಚನ್ನಮ್ಮನ ಕಿತ್ತೂರಿನಲ್ಲಿ ದೀಪಕ ಕೆಳಗಡೆ, ಕುಮಾರ ಬೆಂಡಿಗೇರಿ,. ಕಟಕೋಳದಲ್ಲಿ ಚೇತನ ನಾಯ್ಕರ, ಸವದತ್ತಿಯಲ್ಲಿ ಹುಸೇನಸಾಬ್‌ ಬೀಳಗಿ, ಸುರೇಬಾನದಲ್ಲಿ ಚುರಚಪ್ಪ ಘಟ್ಟೂರ ಎಂಬಾತನನ್ನು ಗಡಿಪಾರು ಮಾಡಲಾಗಿದೆ.

ಕಳೆದ ಹಲವು ದಿನಗಳಿಂದ

ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಶಾಂತಿಭಂಗ ತರುತ್ತಿದ್ದ ಮತ್ತು ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ವ್ಯಕ್ತಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಈ ಪಟ್ಟಿಯ ಆಧಾರದ ಮೇಲೆ ಎಸ್‌ಪಿ ಅವರು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.

ಗಡೀಪಾರು ಆದೇಶಕ್ಕೆ ಒಳಗಾದವರು ನಿಗದಿತ ಅವಧಿಯವರೆಗೆ ಜಿಲ್ಲೆಯ ಗಡಿಯೊಳಗೆ ಪ್ರವೇಶಿಸುವಂತಿಲ್ಲ.

ಈ 18 ಮಂದಿಯ ಮೇಲೆ ಕೊಲೆ ಯತ್ನ, ಹಲ್ಲೆ, ಬೆದರಿಕೆ ಹಾಗೂ ಹಫ್ತಾ ವಸೂಲಿಯಂತಹ ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಮುಂಬರುವ ಹಬ್ಬಗಳ ಅಥವಾ ವಿಶೇಷ ದಿನಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಈ 'ಪ್ರಿವೆಂಟಿವ್ ಆಕ್ಷನ್' ಕೈಗೊಳ್ಳಲಾಗಿದೆ. ಸಾರ್ವಜನಿಕರ ಧೈರ್ಯ ತುಂಬಲು ಮತ್ತು ರೌಡಿ ಅಟ್ಟಹಾಸಕ್ಕೆ ಬ್ರೇಕ್‌ ಹಾಕಲು ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಯಾರೇ ಕಾನೂನು ಕೈಗೆತ್ತಿಕೊಂಡರೂ ಅಥವಾ ಸಾರ್ವಜನಿಕ ನೆಮ್ಮದಿಗೆ ಅದಕ್ಕೆ ತಂದರು ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ