Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಧ್ಯಮ ಕಣ್ಗಾವಲು ಘಟಕಕ್ಕೆ ವೆಚ್ಚ ವೀಕ್ಷಕರ ಭೇಟಿ

 

 

ಬೆಳಗಾವಿ :
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ(ಏ.29) ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಹರಕ್ರಿಪಾಲ್ ಖಟಾನಾ ಅವರು, ದಿನಪತ್ರಿಕೆ, ಟಿವಿ ಚಾನೆಲ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಪ್ರತಿಯೊಂದು ಚುನಾವಣಾ ಸುದ್ದಿ‌ ಹಾಗೂ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಚುನಾವಣಾ ಜಾಹೀರಾತುಗಳಿಗೆ ಸಂಬಂಧಿಸಿದ ವೆಚ್ಚವನ್ನು ಸಹಾಯಕ ವೆಚ್ಚ ನೋಡಲ್ ಅಧಿಕಾರಿಗಳ ಗಮನಕ್ಕೆ ತರಬೇಕು.
ಇದಲ್ಲದೇ ಮಾದರಿ ನೀತಿಸಂಹಿತೆ ಉಲ್ಲಂಘನೆ ಕಂಡುಬಂದರೆ ಅಂತಹ ವಿಷಯಗಳನ್ನು ಕೂಡ ಎಂ.ಸಿ.ಸಿ. ನೋಡಲ್ ಅಧಿಕಾರಿಗಳ ಅವಗಾಹನೆಗೆ ತರಬೇಕು ಎಂದು ತಿಳಿಸಿದರು.

ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಅವರು, ಪ್ರತಿಯೊಂದು ದಿನಪತ್ರಿಕೆಗಳು, ಟಿವಿ ಚಾನೆಲ್‌ ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ವಿವರಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ನರಸಿಂಗ್ ರಾವ್ ಬಿ., ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಎನ್.ಮೋಹನ‌ ಕೃಷ್ಣಾ, ಅಂಕಿತ್ ತಿವಾರಿ, ಐ.ಎ.ಎಸ್.ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಧ್ಯಮ‌ ಘಟಕದ‌ ಉಸ್ತುವಾರಿಗಳಾದ ಶ್ರೀಮತಿ ಝಡ್.ಜಿ.ಸಯ್ಯದ್, ವಿ.ಎಂ.ಕಂಗ್ರಾಳಕರ, ಶ್ರೀಮತಿ ಎಂ.ಎಂ.ಪಾಟೀಲ, ಎಸ್.ಎಸ್.ಘೋರ್ಪಡೆ, ಎ.ಬಿ.ಕಾಮಣ್ಣವರ, ಎಂ.ಪಿ.ನಿಚ್ಚಣಕಿ, ಮಹಾಂತೇಶ ಪತ್ತಾರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ