Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ..!

ದಾವಣಗೆರೆ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ತಾವಂಶಿ ಗ್ರಾಮದವರಾದ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳನ್ನು ಗುರುಪೀಠದ ಟ್ರಸ್ಟ್‌ನ ಮುಖಂಡರು ಪದಚ್ಯುತಿಗೊಳಿಸಿದ್ದಾರೆ.

ಮಠದಲ್ಲಿ ಸೋಮವಾರ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 13 ಟ್ರಸ್ಟಿಗಳು ಶ್ರೀಗಳ ಪದಚ್ಯುತಿಗೆ ನಿರ್ಣಯ ಕೈಗೊಂಡಿದ್ದಾರೆ.

ಸ್ವಾಮೀಜಿಗಳನ್ನು ತೆಗೆದು ಹಾಕಲು ಸರ್ವ ಟ್ರಸ್ಟಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳು ಪೀಠಾರೋಹಣದ ಸಂದರ್ಭದಲ್ಲಿ ತಿಳಿಸಿದಂತೆ ಬೆಂಗಳೂರಿನ ಶ್ವಾಸ ಯೋಗ ಪೀಠವನ್ನು ತ್ಯಜಿಸಬೇಕು ಎಂದು ಹಲವು ಬಾರಿ ಗಡುವು ನೀಡಲಾಗಿತ್ತು. ಈ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿದ ಕಾರಣ ಅವರನ್ನು ಪೀಠದಿಂದ ತೆಗೆದುಹಾಕುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗುರುಪೀಠದ ಟ್ರಸ್ಟಿಗಳಾದ ಬಾವಿ ಬೆಟ್ಟಪ್ಪ, ಬಸವರಾಜ್‌ ದಿಂಡೂರು ತಿಳಿಸಿದ್ದಾರೆ.

ಲೆಕ್ಕಕೊಡಿ ಅಭಿಯಾನ
ಮಠದ ಒಳಗೆ ಟ್ರಸ್ಟಿಗಳ ಸಭೆ ನಡೆಯುತ್ತಿದ್ದರೆ, ಹೊರಗಡೆ ಮಠದ ಭಕ್ತರಿಂದ ಲೆಕ್ಕ ಕೊಡಿ ಅಭಿಯಾನ ನಡೆಯಿತು. ಮಠದ ಆವರಣದಲ್ಲಿ ಭಾರಿ ಹೈಡ್ರಾಮ ನಡೆಯಿತು. ಮಾಜಿ ಶಾಸಕ ಎಚ್‌.ಎಸ್.ಶಿವಶಂಕರ್ ನೇತೃತ್ವದಲ್ಲಿ ಮಠದ ಭಕ್ತರು ಲೆಕ್ಕ ಕೊಡಿ ಎಂದು ಮಠದ ಟ್ರಸ್ಟಿಗಳನ್ನು ಆಗ್ರಹಿಸಿದರು. ಮಠದ ಆವರಣದಲ್ಲಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಸ್ವಾಮೀಜಿಯವರು ಶ್ವಾಸ ಯೋಗ ಪೀಠ ತ್ಯಜಿಸಿ ಪೂರ್ಣ ಪ್ರಮಾಣದಲ್ಲಿ ಸಮುದಾಯದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಟ್ರಸ್ಟ್‌ನ ಸಭೆಗಳಲ್ಲಿ ಈ ಬಗ್ಗೆ ನಿರ್ಧರಿಸಿದಂತೆ ಈಗಾಗಲೇ 6 ಬಾರಿ ಶ್ರೀಗಳಿಗೆ ಈ ಕುರಿತು ತಿಳಿಸಿದ್ದರೂ, ಅವರು ಅಂತಿಮ ನಿರ್ಧಾರ ಕೈಗೊಂಡಿಲ್ಲ. ತಿಂಗಳಲ್ಲಿ ಒಂದೆರಡು ದಿನ ಮಾತ್ರ ಗುರುಪೀಠದಲ್ಲಿರುವ ಅವರು ಬಹುತೇಕ ದಿನ ಬೇರೆಡೆ ಇರುವುದನ್ನು ಒಪ್ಪಲು ಸಾಧ್ಯವಿಲ್ಲ. ಮಠವನ್ನು ಅತಿಥಿಗೃಹ (ಗೆಸ್ಟ್‌ಹೌಸ್) ಮಾಡಿಕೊಳ್ಳಲು ಬಿಡುವುದಿಲ್ಲ' ಎಂದು ಕೆಲವು ದಿನಗಳ ಹಿಂದಷ್ಟೇ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಎಚ್ಚರಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ