Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆ

ನವದೆಹಲಿ: ಕರ್ನಾಟಕ, ದೆಹಲಿ, ಪಂಜಾಬ್ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಜುಲೈ 29ರ ಬದಲಿಗೆ ಆಗಸ್ಟ್ 8 ರವರೆಗೆ ಗಣತಿ ನಮೂನೆ ವಿತರಿಸಲು ಅವಕಾಶ ನೀಡಲಾಗಿದೆ. ಕರಡು ಪಟ್ಟಿಯನ್ನು ಆಗಸ್ಟ್ 5ರ ಬದಲಿಗೆ ಆಗಸ್ಟ್ 17ರಂದು ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.

ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರ ಬದಲಿಗೆ ಅಕ್ಟೋಬರ್ 19 ರಂದು ಪ್ರಕಟಿಸಲಾಗುವುದು ಎಂದು ಪರಿಷ್ಕೃತ ಪ್ರಕಟಣೆ ತಿಳಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜುಲೈ 29ರ ಬದಲಿಗೆ ಆಗಸ್ಟ್ 8 ರವರೆಗೆ ಗಣತಿ ನಮೂನೆ ವಿತರಿಸಲಾಗುತ್ತದೆ. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 5ರ ಬದಲಿಗೆ ಆಗಸ್ಟ್ 17 ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ..

ಪಂಜಾಬ್‌ನಲ್ಲಿ ಗಣತಿ ನಮೂನೆ ವಿತರಣೆಯು ಜುಲೈ 24ರ ಬದಲಿಗೆ ಆಗಸ್ಟ್ 3 ರವರೆಗೆ ಮುಂದುವರಿಯಲಿದೆ. ಕರಡು ಮತದಾರರ ಪಟ್ಟಿಯನ್ನು ಜುಲೈ 31 ರ ಬದಲಿಗೆ ಆಗಸ್ಟ್ 13 ರಂದು ಪ್ರಕಟವಾಗಲಿದೆ. ಅಂತಿಮ ಮತದಾರರ ಪಟ್ಟಿಯು ಅಕ್ಟೋಬರ್ 10ರ ಬದಲಿಗೆ ಅಕ್ಟೋಬರ್ 12 ರಂದು ಹೊರಬರಲಿದೆ.

ತೆಲಂಗಾಣದಲ್ಲಿ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 10 ರಂದು ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 12 ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಮಂಗಳವಾರ, ಹರಿಯಾಣ ಮತ್ತು ಆಂಧ್ರಪ್ರದೇಶದಲ್ಲೂ ಎಸ್‌ಐಆ‌ರ್ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ವಿಸ್ತರಿಸಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!