Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಪೊಲೀಸ್‌ ಆಯುಕ್ತರ ಹೆಸರಿನಲ್ಲಿ ನಕಲಿ ಖಾತೆ ಬಯಲು

Advertisement
ಬೆಳಗಾವಿ: ಬೆಳಗಾವಿ ಮಹಾನಗರ ಪೊಲೀಸ್‌ ಆಯುಕ್ತರ ಭೂಷಣ್‌ ಗುಲಾಬರಾವ್‌ ಬೊರಸೆ ಅವರ ಹೆಸರಿನಲ್ಲಿ ಸೈಬರ್‌ ವಂಚಕರು ನಕಲಿ ಫೇಸ್‌ಬುಕ್‌ ಖಾತೆ ತೆರೆದಿದ್ದಾರೆ.

ಭೂಷಣ್ ಅವರ ಭಾವಚಿತ್ರ ಬಳಸಿ, ಬಿ ಭೂಷಣ್‌ ಗುಲಾಬರಾವ್‌ ಐಪಿಎಸ್‌ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಪೊಲೀಸ್‌ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಸ್ನೇಹಿತರಾಗುವಂತೆ ಕೋರಿದ್ದಾರೆ. ನಂತರ ಮೆಸೆಂಜರ್‌ನಲ್ಲಿ ಚಾಟಿಂಗ್‌ ಮಾಡಿ ಹಣಕ್ಕೆ ಬೇಡಿಕೆ ಇರಿಸಿದ್ದಾರೆ. ಈ ಬಗ್ಗೆ ನಗರ ಸಿಇಎನ್‌ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನನ್ನ ಹೆಸರಿನಲ್ಲಿ ತೆರೆದಿದ್ದ ನಕಲಿ ಫೇಸ್‌ಬುಕ್‌ ಖಾತೆ ಅಳಿಸಲಾಗಿದೆ. ಆರೋಪಿ ಪತ್ತೆಗೆ ಕ್ರಮ ವಹಿಸಲಾಗಿದೆ
ಎಂದು ಪೊಲೀಸ್ ಆಯುಕ್ತ ಭೂಷಣ್‌ ಗುಲಾಬರಾವ್‌ ಬೊರಸೆ ತಿಳಿಸಿದ್ದಾರೆ.

2024 ರಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಜನರಿಗೆ ವಂಚಿಸಲು ಪ್ರಯತ್ನಿಸಲಾಗಿತ್ತು.

ನಗರ ಪೊಲೀಸ್‌ ಉಪ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ರೋಹನ್‌ ಜಗದೀಶ ಹಾಗೂ ನಗರ ಪೊಲೀಸ್‌ ಆಯುಕ್ತರಾಗಿದ್ದ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್ ಅವರ ಪತ್ನಿ ಕ್ರಿಸ್ಟಾಲಿನ್ ಸುಶ್ಮಿತಾ ಎಂ. ಅವರ ಹೆಸರಿನಲ್ಲೂ ಫೇಸ್‌ಬುಕ್‌ನಲ್ಲಿ ನಕಲಿ ತೆರೆಯಲಾಗಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ