Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಸಿದ್ಧ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು: ರಂಗಭೂಮಿ ನಟ ಯಶವಂತ ಸರದೇಶಪಾಂಡೆ (60) ಅವರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಭಾನುವಾರ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿದ್ದ ಅವರು, ಸೋಮವಾರ ಬೆಳಿಗ್ಗೆ ಬೆಂಗಳೂರು ತಲುಪಿದ್ದರು. ಹೃದಯಾಘಾತದ ಕಾರಣ ಅವರನ್ನು ಇಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬೆಳಿಗ್ಗೆ 10 ಗಂಟೆ ವೇಳೆಗೆ ಅವರು ನಿಧನರಾಗಿದ್ದಾರೆ.

ಕನ್ನಡ ರಂಗಭೂಮಿ ನಟರಾಗಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಅವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆಯಾಗಿದ್ದಾರೆ. ಹಾಸ್ಯ ನಾಟಕಗಳ ಮೂಲಕ ಯಶವಂತ ಸರದೇಶಪಾಂಡೆ ಚಿರಪರಿಚಿತರಾಗಿದ್ದರು.

ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದವರಾದ ಯಶವಂತ ಅವರು ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವಿ ಪಡೆದವರು. ನ್ಯೂಯಾರ್ಕ್‌ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನಚಿತ್ರ ಸಂಭಾಷಣೆಯ ವಿಶೇಷ ತರಬೇತಿಯನ್ನೂ ಪಡೆದಿದ್ದರು.

ಅಂಧಯುಗ, ಇನ್‌ಸ್ಪೆಕ್ಟರ್‌ ಜನರಲ್, ಮಿಡ್‌ಸಮರ್‌ ನೈಟ್ಸ್‌ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳನ್ನು ಅವರು ನಿರ್ದೇಶಿಸಿದ್ದಾರೆ.

ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನೂ ರಂಗಕ್ಕೆ ತಂದ ಕೀರ್ತಿ ಇವರದ್ದು. ರೇಡಿಯೋ, ದೂರದರ್ಶನಗಳಿಗಾಗಿ ಕಾರ್ಯಕ್ರಮಗಳನ್ನು ಅವರು ಸಿದ್ಧಪಡಿಸಿದ್ದರು. ಹಾಸ್ಯ ನಾಟಕಗಳನ್ನು ನಿರ್ದೇಶಿಸಿ, ನಟಿಸಿದ ಯಶವಂತ ಅವರು, ಆಲ್‌ ದಿ ಬೆಸ್ಟ್, ರಾಶಿ ಚಕ್ರ, ಸಹಿ ರೀ ಸಹಿ, ದಿಲ್ ಮಾಂಗೆ ಮೋರ್‌ ರಂಗದ ಮೇಲೆ ತಂದ ರಂಗ ಕಲಾವಿದ ಅವರು.

‘ರಾಶಿ ಚಕ್ರ’ ಹಾಸ್ಯ ನಾಟಕದಲ್ಲಿ ಅವರ ಏಕವ್ಯಕ್ತಿ ಅಭಿನಯಕ್ಕೆ ವ್ಯಾಪಕ ಮೆಚ್ಚುಗೆಯ ಜತೆಗೆ ಹಲವೆಡೆ ಯಶಸ್ವಿ ಪ್ರದರ್ಶನ ಕಂಡಿದೆ. ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳಲ್ಲಿ ನಟನೆಯ ಜತೆಗೆ, ಸಂಭಾಷಣೆಕಾರರಾಗಿಯೂ ಅವರ ಕೆಲಸ ಮಾಡಿದ್ದಾರೆ. ರಾಮ ಶ್ಯಾಮ ಭಾಮ ಎಂಬ ಚಲನಚಿತ್ರಕ್ಕೆ ಸಂಭಾಷಣೆ ಬರೆದ ಅವರು, ಕಮಲ್‌ಹಾಸ್‌ ಅವರಿಂದ ಉತ್ತರ ಕರ್ನಾಟಕದ ಆಡುಭಾಷೆಯನ್ನು ಆಡಿಸಿದ್ದರು. ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ ಚಿತ್ರದಲ್ಲೂ ಅವರು ನಟಿಸಿದ್ದಾರೆ.

ದಾವಣಗೆರೆಯ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕರಾಗಿದ್ದರು. ಅಕ್ಟೋಬರ್ ನಲ್ಲಿ ಕೊಳಲು ವಾದಕ ಪಂ.ಪ್ರವೀಣ ಗೋಡಖಿಂಡಿ ಅವರೊಂದಿಗೆ 'ಕೊಳಲು' ನಾಟಕದಲ್ಲಿ ಅವರು ಅಭಿನಯಿಸಬೇಕಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ