Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖ್ಯಾತ ಲೇಖಕಿ ಕಮಲಾ ಹಂಪನಾ ವಿಧಿವಶ

ನಾಡಿನ ಹಿರಿಯ ಸಾಹಿತಿ ಕಮಲಾ ಹಂಪನಾ (88) ನಿಧನರಾಗಿದ್ದಾರೆ. ವಯೋಸಹಜ ಸಮಸ್ಯೆ ಎದುರಿಸುತ್ತಿದ್ದ ಅವರು ಬೆಂಗಳೂರಿನಲ್ಲಿ ಪುತ್ರಿಯ ನಿವಾಸದಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ. ಇದೀಗ ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ದೇಹವನ್ನು ಲೀಲಾವತಿ ಆಸ್ಪತ್ರೆಗೆ ದಾನ ಮಾಡಲಾಗುವುದು.

ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.

ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ. ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಅಮೆರಿಕನ್ ಡಾಲರ್ಸ್ ಕಾಲೊನಿಯಲ್ಲಿ ಇರುವ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಕಮಲಾ ಹಂಪನಾ ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡಿದ್ದಾರೆ.

ಮೂಡುಬಿದರೆಯಲ್ಲಿ ನಡೆದ 71ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಸಂದಿವೆ. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆಯಾಗಿತ್ತು.

ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳಾಗಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ