Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖ್ಯಾತ ಸಾಹಿತಿ ಕೆ.ಟಿ. ಗಟ್ಟಿ ಇನ್ನಿಲ್ಲ

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕರ್ನಾಟಕದ ಗಡಿಭಾಗವಾದ ಕೇರಳದ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯಲ್ಲಿ ನೆಲೆಸಿದ್ದರು.
17 ನೇ ವಯಸ್ಸಿಗೆ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ್ದರು. 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು. ಮಣಿಪಾಲದಲ್ಲಿ ಇಂಗ್ಲಿಷ್‌ ಉಪನ್ಯಾಸಕರಾಗಿ ಇಥಿಯೋಪಿಯಾದಲ್ಲೂ ಶಿಕ್ಷಕರಾಗಿ ಕೆಲಸ ಮಾಡಿದ್ದರು. ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಪಡೆದಿದ್ದರು.
ಕೂಡ್ಲು ತಿಮ್ಮಪ್ಪ ಗಟ್ಟಿ (ಕೆ.ಟಿ. ಗಟ್ಟಿ) ಒಬ್ಬ ಕಾದಂಬರಿಕಾರ, ಭಾಷಾತಜ್ಞ, ಹಾಗೂ ಶಿಕ್ಷಕರು. ಕಾಸರಗೋಡು ಸಮೀಪದ ಕೂಡ್ಲುವಿನಲ್ಲಿ 1938ರ ಜುಲೈ 22ರಂದು ಜನಿಸಿದರು. ತಂದೆ ಧೂಮಪ್ಪ ಗಟ್ಟಿ ಹಾಗೂ ತಾಯಿ ಪರಮೇಶ್ವರಿ.

ಕಾಸರಗೋಡಿನಲ್ಲಿ ಎಸ್‌.ಎಸ್‌.ಎಲ್‌.ಸಿ.ಯಲ್ಲಿ ಉತ್ತೀರ್ಣರಾದ ನಂತರ ಕೇರಳ ವಿಶ್ವವಿದ್ಯಾಲಯದಿಂದ ನಂತರ ಪಿ.ಯು. ಹಾಗೂ ಬಿ.ಎ. ಪದವಿಗಳನ್ನು ಪಡೆದರು. ಅವರು ಕಾಸರಗೋಡಿನ ಕನ್ನಡ ಚಳುವಳಿಯಲ್ಲಿ ಭಾಗವಹಿಸಿದ್ದರು. ಮಾಯಿಪ್ಪಾಡಿಯ ಸರಕಾರಿ ಬೇಸಿಕ್‌ ಟ್ರೈನಿಂಗ್‌ ಶಾಲೆಯಿಂದ ಎರಡು ವರ್ಷಗಳ ಶಿಕ್ಷಕರ ತರಬೇತಿ ಪಡೆದ ಅವರು ತಲಚೇರಿಯ ಸರಕಾರಿ ಟ್ರೈನಿಂಗ್‌ ಕಾಲೇಜಿನಿಂದ ಬಿ.ಎಡ್‌. ಪದವಿ ಪಡೆದು ಕಾಸರಗೋಡಿನ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇರಿದರು. ಕೇರಳ ವಿಶ್ವವಿದ್ಯಾಲಯದಿಂದ ಪಡೆದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದ ಅವರು 1986ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆಗೆ ಇಂಗ್ಲಿಷ್‌ ಉಪನ್ಯಾಸಕರಾಗಿ ಸೇರಿದರು. ಆರು ವರ್ಷಗಳ ಕಾಲ ಇಂಗ್ಲಿಷ್‌ ಉಪನ್ಯಾಸಕರಾದ ನಂತರ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿದ್ದರು.

ಧೂಮಪ್ಪ ಗಟ್ಟಿ ಅವರಿಗೆ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದಿತ್ತು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು. ಹೀಗಾಗಿ ಕೆ.ಟಿ.ಗಟ್ಟಿ ಅವರಿಗೆ ಸಾಹಿತ್ಯದ ಒಲವು ಬಾಲ್ಯದಲ್ಲಿ ಬೆಳೆಯಿತು. ಕೆ.ಟಿ.ಗಟ್ಟಿ ಅವರ ಮೊದಲ ಕಾದಂಬರಿ ‘ಶಬ್ದಗಳು’ 1973ರಲ್ಲಿ ಪ್ರಕಟವಾಯಿತು. ಅವರು 48 ಕಾದಂಬರಿಗಳು, 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳನ್ನು ಬರೆದಿದ್ದಾರೆ. ಅಲ್ಲದೆ, ಆತ್ಮಕಥೆ, ವ್ಯಕ್ತಿಚಿತ್ರ, ಮಕ್ಕಳ ನಾಟಕ ಹಾಗೂ ಪ್ರವಾಸ ಕಥನಗಳನ್ನೂ ಬರೆದಿದ್ದಾರೆ.
ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬರೆದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ