Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಧಿಕಾರಿಗಳಿಂದಲೇ ಗೊಬ್ಬರ ಕಳವು ಆರೋಪ: ತೋಟಗಾರಿಕೆ ಇಲಾಖೆ ಕಚೇರಿಗೆ ರೈತರ ಮುತ್ತಿಗೆ

Advertisement
ಬೆಳಗಾವಿ : ಸವದತ್ತಿ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿರಿಸಿದ ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಸದಸ್ಯರು ತೋಟಗಾರಿಕೆ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿದರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಸಂಪಗಾವಿ ಮಾತನಾಡಿ, 'ತಲಾ ₹ 4,500 ಬೆಲೆಯ 250 ಗೊಬ್ಬರದ ಚೀಲಗಳನ್ನು ಅವಶ್ಯವಿರುವ ರೈತರಿಗೆ ನಿಡದೇ ಅಧಿಕಾರಿಗಳೇ ಕಳವು ಮಾಡಿದ್ದಾರೆ. ಶುಕ್ರವಾರ ಸಂಜೆಯವರೆಗೂ ರೈತರು ಕಚೇರಿಯಲ್ಲಿದ್ದರು. ಕಚೇರಿ ಸಮಯ ಮುಗಿಯುವವರೆಗೂ ನಿಂತರೂ ಗೊಬ್ಬರ ವಿತರಿಸಿಲ್ಲ. ಶನಿವಾರ ಮತ್ತು ಭಾನುವಾರ ರಜೆ ಇದ್ದಾಗ ಕಳವು ಮಾಡಿದ್ದಾರೆ' ಎಂದು ಆರೋಪಿಸಿದರು.

'ಗೊಬ್ಬರ ಪಡೆದ ರೈತರ ವಿವರ ನೀಡಿರಿ ಎಂದರೆ ನೀಡುತ್ತಿಲ್ಲ. ಉತ್ತರಿಸಬೇಕಾದವರು ಮೊಬೈಲ್‌ ಸ್ವಿಚ್‌ ಆಫ್ ಮಾಡಿದ್ದಾರೆ. ಕೆಲವರು ಸಭೆಯ ನೆಪ ಹೇಳಿ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಮಾರ್ಚ್‌ನಲ್ಲಿ ನೀಡಬೇಕಾದುದನ್ನು ಮಳೆಗಾಲ ಆರಂಭವಾದರೂ ಕೊಡುತ್ತಿಲ್ಲ. ಅದನ್ನೇ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಪ್ರಮುಖ ಬಸವರಾಜ ಬಿಜೂರ ಮಾತನಾಡಿ, 'ಗೊಬ್ಬರ ಲೂಟಿಯಲ್ಲಿ ಜನಪ್ರತಿನಿಧಿಗಳು ಹಾಗೂ ಮೇಲಧಿಕಾರಿಗಳ ಕುಮ್ಮಕ್ಕೂ ಇದೆ. ರಸಗೊಬ್ಬರದ ದೊಡ್ಡ ಹಗರಣ ಇದಾಗಿದೆ' ಎಂದು ಆರೋಪಿಸಿದರು.

ರಸ್ತೆ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲು ರೈತರು ಮುಂದಾದರು. ಪೊಲೀಸಲು ರೈತರ ಮನವೊಲಿಸಿ ಪ್ರತಿಭಟನೆ ನಿಲ್ಲಿಸಲು ಯಶಸ್ವಿಯಾದರು. ನಂತರ ಶಿರಸ್ತೇದಾರ ಶಶಿರಾಜ ವನಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ, ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆ