ಬೆಳಗಾವಿ: ಶನಿವಾರ ತಡರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಗೋಕಾಕ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅವರ ದೇಹದ ನಾಲ್ಕೈದು ಭಾಗಗಳಿಗೆ ಚಾಕುವಿನಿಂದ ಇರಿಯಲಾಗಿದೆ. ಒಟ್ಟು ನಾಲ್ವರು ಈ ಘಟನೆ ಎಸಗಿದ್ದಾರೆ ಎನ್ನಲಾಗಿದೆ. ರವಿ ಅವರನ್ನು ಇದೀಗ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಕಾಕ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.