Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

OPS ಜಾರಿಗೆ ಹೋರಾಟ

ಬೆಳಗಾವಿ : ನನೆಗುದಿಗೆ ಬಿದ್ದಿರುವ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಹೇಳಿದರು.

ಚಿಕ್ಕೋಡಿಯ ಪದ್ಮಾ ಮಂಗಲ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಘಟಕ ಶನಿವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಏಳನೇ ವೇತನ ಆಯೋಗಕ್ಕಾಗಿ ಸರ್ಕಾರಿ ನೌಕರರ ಸಂಘ ಪಟ್ಟ ಪ್ರಯತ್ನ ಅಷ್ಟಿಷ್ಟಲ್ಲ. ಸರ್ಕಾರ ಹಿಂದೇಟು ಹಾಕಿದ ವೇಳೆಯಲ್ಲಿ ರಾಜ್ಯದಾದ್ಯಂತ ನೌಕರರು ಹೋರಾಟ ನಡೆಸಿದರು. ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿತು. ಸರ್ಕಾರಿ ನೌಕರರ ಒಗ್ಗಟ್ಟು ಮತ್ತು ಸಂಘಟನಾತ್ಮಕ ಪ್ರಯತ್ನದ ಫಲವಾಗಿ ಏಳನೇ ವೇತನ ಆಯೋಗದ ಲಾಭ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಆಗಸ್ಟ್ 17 ರಂದು ಅವರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಮಾತನಾಡಿ, ಸರ್ಕಾರಿ ನೌಕರರು ಶ್ರದ್ದೆಯಿಂದ ಕೆಲಸ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಸಂಘಟನೆಯು ನೌಕರರ ಹಿತಕಾಪಾಡುವಲ್ಲಿ ಯಶಸ್ಸು ಗಳಿಸಿದೆ. ಸಂಘದ ಕೆಲಸಗಳು ನಿರಂತರವಾಗಿ ನಡೆಯಲಿ ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 600 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ