Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಸಚಿವ ಸಂಪುಟ ವಿಸ್ತರಣೆ ?

 

ಬೆಂಗಳೂರು :
ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದು ಸಚಿವ ಸಂಪುಟ ಸೇರುವ ಆಕಾಂಕ್ಷೆಯಲ್ಲಿರುವ ಶಾಸಕರಲ್ಲಿ
ಹೊಸ ಆಸೆ ಮೂಡಿಸಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಂತಿದೆ. ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯುವ ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.

ಈ ಬಗ್ಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಕೇಂದ್ರದಿಂದಲೂ ಹಸಿರು ನಿಶಾನೆ ಲಭಿಸುವ ಸಾಧ್ಯತೆ ಇದ್ದು ಮುಖ್ಯಮಂತ್ರಿ ಇದೀಗ ಸಚಿವ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹಾ ಶಿಕಾರಿಪುರದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಕೇಂದ್ರ ನಾಯಕತ್ವ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನ ಕೆಲ ನಾಯಕರು ತಾವೇ ಮುಖ್ಯಮಂತ್ರಿ ಎಂದು ಬಡಿದಾಡಿಕೊಳ್ಳುತ್ತಿದ್ದು ಅದು ಕೇವಲ ತಿರುಕನ ಕನಸಾಗಿದೆಯೇ ಹೊರತು ನನಸಾಗುವುದು ಸಾಧ್ಯವಿಲ್ಲ ಎನ್ನುವುದು ಅವರಿಗೂ ಸಹಾ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಜಯಭೇರಿ ಬಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ತಾವು ನಿಂತಿರುವ ನೆಲ ಕುಸಿಯುತ್ತದೆ ಎಂಬ ಬಗ್ಗೆ ಅರಿವಿಲ್ಲದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಮತ್ತು ಇತರರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದು ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಸಂಪುಟಕ್ಕೆ ಯಾರು : ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಬಹುದು. ಇನ್ನೊಬ್ಬ ಮಾಜಿ ಸಚಿವ ಯೋಗೇಶ್ವರ ಸಹ ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ