Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!

Advertisement

ಬೆಳಗಾವಿ :  ಮಾರ್ಚ್ ತಿಂಗಳ ಗೃಹಲಕ್ಷ್ಮಿ ಇನ್ನು 4 -5 ದಿನದಲ್ಲಿ ಹಾಗೂ ಏಪ್ರಿಲ್ ತಿಂಗಳ ಹಣ ಇನ್ನು 8 -10 ದಿನದಲ್ಲಿ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಾಕನೂರು ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಬೆಳಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಗ್ರಾಮಸ್ಥರನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೆಲಸ ಮಾಡುವುದೆಂದರೆ ನನಗೆ ಹುಚ್ಚು. 2013ರಲ್ಲಿ ಚುನಾವಣೆಯಲ್ಲಿ ಸೋತ ನಂತರ ಕೂಡ ಕೆಲಸ ಮಾಡುತ್ತಲೇ ಇದ್ದೆ. ಬೇರೆಯವರಂತೆ ನಾಟಕ ಮಾಡುವುದು ನನಗೆ ಗೊತ್ತಿಲ್ಲ, ಕೆಲಸ ಮಾಡುವುದೊಂದೇ ನನಗೆ ಗೊತ್ತು. ಹಿಂದೆ ಆಯ್ಕೆಯಾದವರು ಬರೇ ಹಿಂದುತ್ವ ಎಂದುಕೊಂಡು ಓಡಾಡಿದ್ದನ್ನು ಬಿಟ್ಟು ಬೇರೇನೂ ಮಾಡಿಲ್ಲ. ನಾನು ಹೇಳುವುದಿಲ್ಲ, ಮಾಡಿ ತೋರಿಸುತ್ತಿದ್ದೇನೆ. ಪ್ರತಿಯೊಂದು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಸರ್ವ ಭಾಷಿಕ, ಸರ್ವ ಜಾತಿಯ ಜನರ ಕೆಲಸ ಮಾಡುತ್ತಿದ್ದೇನೆ. ಸರ್ವ ಕ್ಷೇತ್ರದಲ್ಲೂ ನಂಬರ್ ಒನ್ ಮಾಡುವ ಮೂಲಕ ಬಾರಾಮತಿಯಂತೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ನಾನು ಹೊಂದಿದ್ದೇನೆ ಎಂದು ಅವರು ತಿಳಿಸಿದರು. 

ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಯಷ್ಟೇ ಅಲ್ಲದೆ ಶಿಕ್ಷಣ, ಆರೋಗ್ಯ ಕ್ಷೇತ್ರದ  ಔನ್ನತ್ಯಕ್ಕೂ ಕೆಲಸ ಮಾಡುತ್ತಿದ್ದೇನೆ. ರೈತರು ವರ್ಷಕ್ಕೆ 2 -3 ಬೆಳೆ ಬೆಳೆಯುವಂತೆ ನೀರಾವರಿ ಸೌಲಭ್ಯ ಮಾಡಿಕೊಡುವ ಕನಸು ಹೊಂದಿದ್ದೇನೆ. ನಿಮ್ಮೆಲ್ಲರ ನಿರಂತರ ಬೆಂಬಲವಿರಲಿ ಎಂದೂ ಅವರು ತಿಳಿಸಿದರು.

 ಕಾಡಾ ಅಧ್ಯಕ್ಷ ಯುವರಾಜ ಕದಂ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿದಂತೆ ಹಲವಾರು ಮುಖಂಡರು, ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ