Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಸಿಕ್ತು ಡೆತ್ ನೋಟ್ : ಅಸ್ತಿಪಂಜರ ಪ್ರಕರಣಕ್ಕೆ ಹೊಸ ತಿರುವು

 

ಚಿತ್ರದುರ್ಗ :
ನಗರದ ಮನೆಯೊಂದರಲ್ಲಿ ಸಿಕ್ಕಿರುವ ಐದು ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅಕ್ಕಪಕ್ಕದ ನಿವಾಸಿಗಳು ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ್ದಾರೆ. ಈ ನಡುವೆ ಡೆತ್ ನೋಟ್ ಸಹಾ ಪತ್ತೆಯಾಗಿದೆ.

ಜನನಿಬಿಡ‌ಪ್ರದೇಶವಾಗಿದ್ದ‌ ಜಿಲ್ಲಾ ಕಾರಾಗೃಹ ರಸ್ತೆ ಈಗ ಬಿಕೋ ಎನ್ನುತ್ತಿದೆ. ಕಾರಣ ಪಾಳು ಬಿದ್ದ ಮನೆಯ ಅಕ್ಕಪಕ್ಕದ‌ ನಿವಾಸಿಗಳು ಆತಂಕಗೊಂಡು ತಮ್ಮ ಮನೆಗಳಿಗೆ ಬೀಗ ಹಾಕಿ ನೆಂಟರ ಊರುಗಳಿಗೆ ತೆರಳಿದ್ದಾರೆ.

ಇತ್ತ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ಭಯಗೊಂಡಿರುವ ವಾಯುವಿಹಾರಿಗಳು ಇಂದು ರಸ್ತೆಯತ್ತ ಮುಖಮಾಡಿಲ್ಲ. ಪ್ರತಿ ದಿನ ನಾಗರಿಕರು ಬೆಳಗ್ಗೆ ಮತ್ತು ಸಂಜೆ ಈ ರಸ್ತೆಯಲ್ಲಿ ವಾಕಿಂಗ್‌ ಬರುತ್ತಿದ್ದರು. ಆದರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಅವರು ಭಯಗೊಂಡಿದ್ದಾರೆ. ಇದೇ ರಸ್ತೆಯ ಕೊನೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗಳು ಇದ್ದು, ಅಲ್ಲಿಗೂ ಗ್ರಾಹಕರು ಬರುತ್ತಿಲ್ಲ ಎನ್ನಲಾಗಿದೆ. ಒಟ್ಟಿನಲ್ಲಿ ವಾಹನ ಸಂಚಾರ, ಜನದಟ್ಟಣೆ ಇಲ್ಲದೇ ಜೈಲು ರಸ್ತೆ‌ ಬಿಕೋ ಎನ್ನುತ್ತಿದೆ.

ಏನಿದು ಘಟನೆ..?
ಚಿತ್ರದುರ್ಗದ ನಗರದ ಪಾಳು ಬಿದ್ದ ಮನೆಯೊಂದರಲ್ಲಿ 5 ಅಸ್ಥಿಪಂಜರ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸತತ 4 ವರ್ಷಗಳಿಂದ ಬಾಗಿಲು ಮುಚ್ಚಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಪವನ್ ಕುಮಾರ್ ಎಂಬವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ಸಂಬಂಧಿ ಜಗನ್ನಾಥ ರೆಡ್ಡಿ ಮತ್ತು ಕುಟುಂಬ ವಾಸವಾಗಿತ್ತು. ಸುಮಾರು ವರ್ಷಗಳಿಂದ ಜಗನ್ನಾಥ ರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ. ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥ ರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವುದು ಅವರ ಅಸ್ಥಿಪಂಜರ ಆಗಿರಬಹುದೆಂಬ ಶಂಕೆ ಇದೆ. 3 ವರ್ಷದ ಹಿಂದೆಯೇ ಮನೆಯಲ್ಲಿ ಮೃತಪಟ್ಟಿರಬಹುದು ಎಂದು ಮೃತರ ಸಾವಿನ ಬಗ್ಗೆ ಅನುಮಾನ ಇದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಈ ಸಂಬಂಧ ಎಸ್‌ಪಿ ಧರ್ಮೇಂದರ್ ಕುಮಾರ್, ಡಿವೈಎಸ್ಪಿ ಅನಿಲ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ 4 ವರ್ಷದ ಹಿಂದಿನ ಡೆತ್‍ನೋಟ್ ಈ ಐವರ ಸಾವಿನ ಸುಳಿವನ್ನು ಕೊಟ್ಟಿತ್ತು. ಸಾವಿಗೂ ಮುನ್ನ ಈ ಐವರು ಡೆತ್‍ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ. ಜೈಲು ಪಾಲಾಗಿದ್ದಕ್ಕೆ ಮನನೊಂದು ಐವರು ಸಾವಿಗೆ ಶರಣಾಗಿರುವುದು ಬಯಲಾಗಿತ್ತು.

ಊಹಾಪೋಹದ
ಗೊಂದಲಮಯ ಡೆತ್ ನೋಟ್ :
ಕೆಲವರು ಹೇಳುವಂತೆ
ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. 2013 ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ನರೇಂದ್ರ ಅವರು ತಮ್ಮ ಗೆಳೆಯರ ಜೊತೆ ತೆರಳಿ ದರೋಡೆ ಕೇಸಲ್ಲಿ ಭಾಗಿ ಆಗಿದ್ದರು. ಹೀಗಾಗಿ ದರೋಡೆ ಕೇಸಲ್ಲಿ ಕೆಲ ದಿನ ಜೈಲುವಾಸವನ್ನೂ ಅನುಭವಿಸಿದ್ದರು. ನರೇಂದ್ರರೆಡ್ಡಿ ವಿರುದ್ಧದ ಕೇಸಿನಿಂದ ಮನನೊಂದಿದ್ದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶರಣಾಗಿದ್ದರಂತೆ.

ಆದರೆ, ಕೆಲವರು ಹೇಳುವ ಡೆತ್ ನೋಟ್ ಬೇರೆಯೇ ಇದೆ.
ಡೆತ್‌ನೋಟ್‌ನಲ್ಲಿ ಇಬ್ಬರು ವ್ಯಕ್ತಿಗಳ ಹೆಸರನ್ನು ಕುಟುಂಬ ಉಲ್ಲೇಖಿಸಿದೆ. ಈ ಇಬ್ಬರು ವ್ಯಕ್ತಿಗಳು ನೀಡುತ್ತಿರುವ ಚಿತ್ರಹಿಂಸೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಬರೆಯಲಾಗಿದೆ.

ಜಮೀನು ಪ್ರಕರಣದ ವಿಚಾರಣೆ ವೇಳೆ ಇಬ್ಬರು ವ್ಯಕ್ತಿಗಳು ನಮಗೆ ಹಿಂಸೆ ನೀಡುತ್ತಿದ್ದಾರೆ. ಅವರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈ ವ್ಯಕ್ತಿಗಳ ಹೆಸರನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಡೆತ್‌ನೋಟ್‌ನಲ್ಲಿಯೂ ಸಾಕಷ್ಟು ಅನುಮಾನಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಇಬ್ಬರು ವ್ಯಕ್ತಿಗಳನ್ನು ಹುಡುಕಿ ವಿಚಾರಣೆ ನಡೆಸುವ ಬಗ್ಗೆ ಪೊಲೀಸರು ಗಮನಹರಿಸಿದ್ದಾರೆ ಎನ್ನಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ