Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಬೆಂಗ್ಳೂರು ವಿಮಾನಕ್ಕೆ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮೇ 31ರಂದು ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನದ ಟಿಕೆಟ್‌ ಬುಕ್‌ ಆಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ತಿಳಿಸಲು ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್‌ ರೇವಣ್ಣ, ಮ್ಯೂನಿಚ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್‌ ವಿಮಾನದಲ್ಲಿ ಬರಲಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ಆಧಾರದ ಮೇಲೆ ಎಸ್‌ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದು, ಪ್ರಜ್ವಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅವರನ್ನು ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆ ನಿಚ್ಚಳವಾಗಿದೆ.

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಮಾರನೇ ದಿನವೇ ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದರು. ಬಳಿಕ ಅವರ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ಹಾಸನ ಜಿಲ್ಲೆಯಲ್ಲಿ ದಾಖಲಾಗಿದ್ದವು. ನಂತರ ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಪ್ರಜ್ವಲ್‌ಗೆ ನೋಟಿಸ್‌ ನೀಡಿತ್ತು. ವಿದೇಶದಲ್ಲಿದ್ದ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಹೀಗಾಗಿ ಎಸ್‌ಐಟಿ, ಇಂಟರ್‌ಪೋಲ್‌ ಮುಖಾಂತರ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೊಳಿಸಿತ್ತು.
ಅಲ್ಲದೆ, ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ ಪೋರ್ಟ್‌ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು.ಎರಡು ದಿನಗಳ ಹಿಂದೆ ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್‌, ಮೇ 31ರಂದು ಬೆಂಗಳೂರಿಗೆ ವಾಪಸ್‌ ಆಗಿ ಎಸ್‌ಐಟಿ ಎದುರು ಹಾಜರಾಗುವುದಾಗಿ ತಿಳಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ