Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ರುದ್ರಗೌಡ ಪಾಟೀಲ ಬಂಧನ

 

ಬೆಂಗಳೂರು :
ಕೆಇಎ ಪರೀಕ್ಷಾ ಹಗರಣದ ಆರೋಪಿ ರುದ್ರಗೌಡ ಪಾಟೀಲ್​ನನ್ನು ಕೊನೆಗೂ ಬಂಧಿಸಲಾಗಿದೆ. ಕಲಬುರಗಿ ಜಿಲ್ಲಾ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಅಫಜಲಪುರ-ಮಹಾರಾಷ್ಟ್ರ ಗಡಿಯಲ್ಲಿ ಪಾಟೀಲ್​ನನ್ನು ಬಂಧಿಸಿದೆ. ಬಂಧಿಸಲು ಪೊಲೀಸರು ಆಗಮಿಸಿದ್ದ ವೇಳೆ ಕಂಪೌಂಡ್ ಹಾರಿ ಪರಾರಿಯಾಗಿದ್ದ ರುದ್ರಗೌಡ ಪಾಟೀಲ್, ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ.

ರುದ್ರಗೌಡ ಪಾಟೀಲ್​ನನ್ನು​ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆತಂದಿದ್ದಾರೆ. ಈತ ನವೆಂಬರ್ 6ರಂದು ಕಲಬುರಗಿಯ ವರ್ಧಾ ಲೇಔಟ್​ನಲ್ಲಿರುವ ಮಹಾಲಕ್ಷ್ಮೀ ಅಪಾರ್ಟ್​ಮೆಂಟ್ ಕಾಂಪೌಂಡ್ ಹಾರಿ ಪರಾರಿಯಾಗಿದ್ದ.

ನವಂಬರ್ 6 ರಂದು ಕಂಪೌಂಡ್ ಹಾರಿ ಪರಾರಿಯಾಗಿದ್ದ ಆರ್​ಡಿ ಪಾಟೀಲ್, ಜೈಲಿನಿಂದ ಹೊರಗಡೆ ಇದ್ದುಕೊಂಡೇ ಜಾಮೀನು ಪಡೆಯಲು ಯತ್ನಿಸಿದ್ದ. ಜಾಮೀನು ಅರ್ಜಿಯನ್ನು ಜಾಮೀನು ಅರ್ಜಿಯನ್ನು ಕಲಬುರಗಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನವೆಂಬರ್ 7ರಂದು ತಿರಸ್ಕರಿಸಿತ್ತು. ಮತ್ತೊಂದಡೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಅರ್ಜಿ ‌ವಿಚಾರಣೆ ನವಂಬರ್ 16 ಕ್ಕೆ ಮುಂದೂಡಿಕೆಯಾಗಿದೆ.

ಕೆಇಎ ಪರೀಕ್ಷೆ ಕಿಂಗಪಿನ್ ರುದ್ರಗೌಡ ಪಾಟೀಲ್ ಬಂಧನಕ್ಕೆ ಪೊಲೀಸರಿಗೆ ಸಿಐಡಿ ಅಧಿಕಾರಿಗಳ ಮಾಹಿತಿ ಸಹಕಾರಿಯಾಗಿದೆ. ಈ ಹಿಂದೆ ಪಿಎಸ್ಐ ‌ಅಕ್ರಮದಲ್ಲಿ ರುದ್ರಗೌಡನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಹೀಗಾಗಿ ಅವರಲ್ಲಿ ಆತನ ಬಗ್ಗೆ ಹೆಚ್ಚು ಮಾಹಿತಿ ಇದ್ದವು. ಕಲಬುರಗಿಯಲ್ಲಿರೋ ಕೆಲ ಸಿಐಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದ ಕಲಬುರಗಿ ಪೊಲೀಸರು ಆತನ ಅಡಗುತಾಣ, ಆತನ ಸಹಚರರ ಬಗ್ಗೆ ಮಾಹಿತಿ ಕಲೆ ಹಾಕಿ ಕಾರ್ಯಾಚರಣೆ ನಡೆಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ