Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಸೂರಜ್ ರೇವಣ್ಣಗೆ ಜಾಮೀನು

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು‌ ಮಂಜೂರು ಮಾಡಿದೆ.

ಸದ್ಯ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರು ಆಗಿದ್ದು, ಇನ್ನೊಂದು ಪ್ರಕರಣದ ಆದೇಶವನ್ನು ಕೋರ್ಟ್‌ ಕಾಯ್ದಿರಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕಣದಲ್ಲಿ ಸೂರಜ್‌ಗೆ ಷರತ್ತು ಬದ್ಧ ಜಾಮೀನನ್ನು ನ್ಯಾಯಾಲಯ ನೀಡಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು. ಇದೀಗ ಜಾಮೀನು ಮಂಜೂರು ಆಗಿದ್ದರೂ ಸೂರಜ್‌ಗೆ ಬಿಡುಗಡೆ ಭಾಗ್ಯವಿಲ್ಲ. ಮತ್ತೊಂದು ಪ್ರಕರಣದಲ್ಲಿ ತೀರ್ಪು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಸದ್ಯಕ್ಕೆ ಜೈಲೇ ಗತಿಯಾಗಿದೆ.

ಜೂನ್‌ 23 ರಂದು ಬಂಧನವಾಗಿದ್ದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್‌ಗೆ ಜಾಮೀನು ಸಿಕ್ಕಿದೆ. ಸೂರಜ್‌ ವಿರುದ್ಧ ಇಬ್ಬರು ದೂರು ಸಲ್ಲಿಸಿದ್ದರು. ಇದರಲ್ಲಿ ಒಂದು ಕೇಸ್‌ನಲ್ಲಿ ಮಾತ್ರ ಜಾಮೀನು ಮಂಜೂರಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ