ಕೊನೆಗೂ ಹಸುಗಳ ಕೆಚ್ಚಲು ಕೊಯ್ದ ಆರೋಪಿ ಬಂಧನ
ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ನನ್ ಮೊಹಲ್ಲಾದ ರಸ್ತೆ ಬದಿಯ ಶೆಡ್ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಮಚ್ಚಿನಿಂದ ಕಾಲಿಗೆ ಹೊಡೆದಿದ್ದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಶೇಖ ನನ್ನೂ(35) ಬಂಧಿತ ಆರೋಪಿ.ಭಾನುವಾರ ಬೆಳಿಗ್ಗೆ ಘಟನೆ ನಡೆದಿತ್ತು. ಬಿಎನ್ಎಸ್ ಸೆಕ್ಷನ್ 325 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಕೃತ್ಯ ನಡೆದ ಸ್ಥಳದಿಂದ ಸುಮಾರು 50 ಮೀಟರ್ನಷ್ಟು ದೂರ ಇರುವ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಗೆ ಅಂಗಡಿಯಲ್ಲಿ ಆರೋಪಿ ಕೆಲಸ ಮಾಡುತ್ತಿದ್ದ. ಮದ್ಯದ ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವುದಾಗಿ ಆರೋಪಿ ತಪ್ರೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಆರೋಪಿ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿದ್ದು, ಜನವರಿ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಹಾಗೂ ಬಿಜೆಪಿ ಮುಖಂಡರು ಭಾನುವಾರ ಪ್ರತಿಭಟನೆ ನಡೆಸಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.