Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಪಂಚಮಸಾಲಿ ಸಮಾಜದ ಮಹತ್ವದ ಬೇಡಿಕೆ ಕುರಿತು ಚರ್ಚಿಸಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:

•ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.

• ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ.

• ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು.

• ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದರು.

• ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

• ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿತು.

• ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.

  • • ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್‌ ಹೆಗ್ಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿಯನ್ನು ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ