Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಕಾಂಗ್ರೆಸ್ ಆಫರ್ ತಿರಸ್ಕರಿಸಿದ ಮಾಜಿ ಸಿಎಂ

 

ಬೆಂಗಳೂರು :
ಕಾಂಗ್ರೆಸ್ ಸೇರ್ಪಡೆಯ ವಿಷಯದಲ್ಲಿ ಮಾಜಿ ಸಿಎಂ ಸದಾನಂದ ಗೌಡ ಇದೀಗ ಹಿಂದೆ ಸರಿದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಸದಾನಂದ ಗೌಡರ ಕಾಂಗ್ರೆಸ್ ಸೇರ್ಪಡೆಗೆ ಇನ್ನೊಬ್ಬ ಮಾಜಿ ಸಿಎಂ ಜಗದೀಶ ಶೆಟ್ಟರ್ ಉದಾಹರಣೆ ನೀಡಿ ಗೌಡರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಆದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸದಾನಂದ ಗೌಡರ ಸ್ಪರ್ಧೆಗೆ ಮುಕ್ತ ಅಹ್ವಾನ ನೀಡಿದ್ದರು. ಆದರೆ, ಕೊನೆಗೂ ಸದಾನಂದಗೌಡರು ತೂಗಿ ಅಳೆದು ಕಾಂಗ್ರೆಸ್ ಸೇರ್ಪಡೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಸ್ಪಷ್ಟನೆ : ಸದಾನಂದ ಗೌಡರಂತೆ ನಿಷ್ಠಾವಂತ, ಶಿಸ್ತುಬದ್ದ ಕಾರ್ಯಕರ್ತ ಬಿಜೆಪಿಯಲ್ಲಿ ಯಾರು ಇಲ್ಲ. ಇವರೊಬ್ಬ ಸ್ಥಿತಪ್ರಜ್ಞ ರಾಜಕಾರಣಿ ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರಲಾರರು' ಎಂದು ಎಸ್. ಹರೀಶ್ ಹೇಳಿದ್ದಾರೆ.

ಮಂಗಳವಾರ ಡಿ. ವಿ. ಸದಾನಂದ ಗೌಡರು ಒಕ್ಕಲಿಗರ ಸಂಘದ ನಿರ್ದೇಶಕರು, ಪದಾಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು. ಬಳಿಕ ಬುಧವಾರ ಪತ್ರಿಕಾಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಆದರೆ ಇಂದು ಪತ್ರಿಕಾಗೋಷ್ಠಿಯನ್ನು ದಿಢೀರ್ ರದ್ದುಗೊಳಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈತಪ್ಪಿರುವ ಸದಾನಂದ ಗೌಡರಿಗೆ ಹೈಕಮಾಂಡ್ ನಾಯಕರು ಕರೆ ಮಾಡಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡುವ ಕುರಿತು ಭರವಸೆ ನೀಡಿದ್ದಾರೆ ಎಂಬ ಸುದ್ದಿ ಇದೆ.

ಇಂದು ಅಥವಾ ನಾಳೆ ಬಿಡುಗಡೆಯಾಗಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸದಾನಂದ ಗೌಡರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡಲಾಗುತ್ತದೆ ಎಂಬ ಊಹಾಪೋಹ ಇದೆ. ಈ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಸದಾನಂದ ಗೌಡರ ಜೊತೆ ಮಾತುಕತೆ ನಡೆಸಿದ್ದಾರೆ.

ಆದ್ದರಿಂದ ಸದಾನಂದ ಗೌಡರು ಇಂದು ಕರೆದಿದ್ದ ಪತ್ರಿಕಾಗೋಷ್ಠಿ ರದ್ದುಗೊಳಿಸಿದ್ದಾರೆ. ಮಂಗಳವಾರ ಸದಾನಂದ ಗೌಡರು ಕಾಂಗ್ರೆಸ್ ಸೇರಿ ಉಡುಪಿ-ಚಿಕ್ಕಮಗಳೂರು ಅಥವ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು.

ಚಿಕ್ಕಬಳ್ಳಾಪುರದ ಹಾಲಿ ಸಂಸದರು ಬಿ. ಎನ್. ಬಚ್ಚೇಗೌಡ. ಆದರೆ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಈಗಾಗಲೇ ಅವರು, "ಬೇರೆ ರಾಜಕೀಯ ಪಕ್ಷ ಸೇರುವುದಿಲ್ಲ. ಚುನಾವಣಾ ರಾಜಕೀಯದಿಂದ ದೂರ ಇರುವೆ. ಆದರೆ ಸಕ್ರಿಯ ರಾಜಕಾರಣದಲ್ಲಿಯೇ ಇರುವೆ" ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಚಿಕ್ಕಬಳ್ಳಾಪುರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಮಂಡ್ಯ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾರಣ ಸುಮಲತಾ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಈ ಸುದ್ದಿಯನ್ನು ಅವರು ತಳ್ಳಿ ಹಾಕಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ