Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕೊನೆಗೂ ಪೊಲೀಸರಿಗೆ ಗುಡ್‌ ನ್ಯೂಸ್ ಕೊಟ್ಟ ಸರ್ಕಾರ; ಸಿಕ್ಕೇ ಬಿಡ್ತು ಅಂತರ ಜಿಲ್ಲಾ ವರ್ಗಾವಣೆಗೆ ಹಸಿರು ನಿಶಾನೆ

ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಪೊಲೀಸ್‌ ಇಲಾಖೆಯ ಸಿಬ್ಬಂದಿಯಿಂದ ಬಂದಿರುವ ಅಂತರ ಜಿಲ್ಲಾ ವರ್ಗಾವಣೆ ಪ್ರಸ್ತಾವನೆಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಆದೇಶಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗಂಡ ಹೆಂಡತಿ ಇಬ್ಬರೂ ಬೇರೆ ಬೇರೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲಸದ ನಿಮಿತ್ತ ಮದುವೆಯಾಗಿ 5 ವರ್ಷಗಳಾದರೂ ಮಕ್ಕಳು ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ, ದಯಾಮರಣ ಕಲ್ಪಿಸಿ ಎಂದು ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದರು. ರಾಜ್ಯ ಸರ್ಕಾರದಿಂದ ಅರ್ಹ ಅಂತರಜಿಲ್ಲಾ ವರ್ಗಾವಣೆಗಳ ಪ್ರಸ್ತಾವನೆಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ಸೂಚಿಸಲಾಗಿದೆ. ಅದರಲ್ಲಿಯೂ ಲೋಕಸಭಾ ಚುನಾವನೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಮೂಲಕ ರಾಜ್ಯದ ಪೊಲೀಸರಿಗೆ ಸರ್ಕಾರದಿಂದ ಗುಡ್‌ ನ್ಯೂಸ್‌ ಕೊಡಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೇ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ಪತಿ ಒಂದು ಜಿಲ್ಲೆ, ಪತ್ನಿ ಒಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ಗಂಡ-ಹೆಂಡತಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ವಿಚ್ಛೇದನ ಪ್ರಕರಣ ಕೂಡ ಹೆಚ್ಚುತ್ತಿವೆ. ಕೆಲ ಸಿಬ್ಬಂದಿ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಕೋರಿ ಮನವಿ ಮಾಡಿದ್ದರು.

ಮುಖ್ಯಮಂತ್ರಿಗಳು, ಗೃಹ ಇಲಾಖೆ ಮಂತ್ರಿಗಳು ಬಾಯಿ ಮಾತಿನಲ್ಲಿ ವರ್ಗಾವಣೆ ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಅಂತರ ಜಿಲ್ಲಾ ವರ್ಗಾವಣೆ ಲಿಖಿತ ರೂಪದಲ್ಲಿ ಬರುತ್ತಿಲ್ಲ ಎಂದು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿ ಪತ್ರ ಬರೆದಿದ್ದಾರೆ. ಪತಿ-ಪತ್ನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್ಆ‌ರ್ ನಿಯಮದ ಪ್ರಕಾರ ಒಂದೆ ಘಟಕ ಹಾಗೂ ಒಂದೇ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದ್ದರು ಕೊಡ ಕಳೆದ 3 ವರ್ಷಗಳಿಂದ ಮಾನ್ಯ ಕರ್ನಾಟಕ ಸರ್ಕಾರವಾಗಲಿ, ರಾಜ್ಯ ಗೃಹ ಸಚಿವರಾಗಲಿ, ಪೊಲೀಸ್​ ಮುಖ್ಯಸ್ಥರಾಗಲಿ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.

ಈ ವಿಚಾರವಾಗಿ ಸುಮಾರು 3 ವರ್ಷಗಳಿಂದ ಮಾನ್ಯ ಗೃಹ ಸಚಿವರಿಗೆ ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವಗಾವಣೆ ಮಾಡುವಂತೆ ಆನೇಕ ಬಾರಿ ಮನವಿನಲ್ಲಿಸಿದ್ದು, ಈ ವಿಚಾರವಾಗಿ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಃ ಯಾವುದೆ ವರ್ಗಾವಣೆ ಮಾಡುತ್ತಿಲ್ಲ. ನಾವುಗಳು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ನೌಕರಿ ಮಾಡುತ್ತಾ ಹೆತ್ತ ಮಕ್ಕಳ ಲಾಲನೆ ಪಾಲನೆ ಮಾಡದೆ ಜನ್ಮ ಕೊಟ್ಟ ಅಪ್ಪ ಅಮ್ಮ ಇವರ ಪೋಷಣೆ ಮಾಡಲಾಗದೆ ಜೀವನ ನಡೆಸುವಂತಾಗಿದೆ. ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವು ವಿಚ್ಛೇದನ ಕೊಟ್ಟಾಗಿದೆ ಎಂದು ಅಳಲು ತೋಡಿಕೊಂಡಿದ್ದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು