Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆಗಿಳಿದ ಆರೋಗ್ಯ ಇಲಾಖೆ !

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೇಶ ಕೋಣಿ ಅವರು ಜನಜೀವಾಳ ಪ್ರಕಟಿಸಿರುವ ವರದಿ ಗಮನಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ನಡೆದಿರುವ ನಕಲಿ ವೈದ್ಯರ ಹಾವಳಿ ಹಾಗೂ ನಕಲಿ ಕ್ಲಿನಿಕ್ ಬಗ್ಗೆ ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಮುಲಾಜಿಲ್ಲದೆ ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಬಂದ್ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಸಿರುವುದು ಕಂಡು ಬಂದರೆ ತಾಲೂಕು ಆರೋಗ್ಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ :
ದಕ್ಷಿಣ ಭಾರತದ ಸುಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಿ ಕ್ಷೇತ್ರದಲ್ಲಿ ನಡೆಯುವ ಬನದ ಹುಣ್ಣಿಮೆ, ಭಾರತ ಹುಣ್ಣಿಮೆ ಪ್ರಯುಕ್ತ ಲಕ್ಷಾಂತರ ಜನ ಸೇರುತ್ತಾರೆ. ಇದೇ ಸಂದರ್ಭದಲ್ಲಿ ನಕಲಿ ವೈದ್ಯರು ಹಾವಳಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಜನಜೀವಾಳ ಸರ್ಚ್ ಲೈಟ್ ಮೂಲಕ ಜಿಲ್ಲಾಡಳಿತ ಗಮನ ಸೆಳೆದಿದ್ದು ತಕ್ಷಣ ಕಾರ್ಯ ಪ್ರವೃತ್ತರಾದ ಸವದತ್ತಿ ಆರೋಗ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆದಿಲ್ಲ. ಕೇವಲ ಹೆಸರಿಗೆ ಮಾತ್ರ ಎಂಬಂತೆ ಕಾರ್ಯಚರಣೆ ನಡೆದಿರುವುದು ಕಂಡುಬಂದಿದೆ. ಈ ಬಗ್ಗೆ ಸ್ವತಃ ಜನರೇ ಜನಜೀವಾಳಕ್ಕೆ ಮಾಹಿತಿ ನೀಡಿದ್ದಾರೆ.

ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಬನದ ಹುಣ್ಣುಮೆ ಪ್ರಯುಕ್ತ ಜಾತ್ರಾ ಮಹೋತ್ಸವ ನಡೆಯತ್ತಿದ್ದು, ಈ ಸಂದರ್ಭದಲ್ಲಿ ಪರವಾನಿಗೆ ಪಡೆಯದೆ ಅನಧಿಕೃತವಾಗಿ ತಾತ್ಕಾಲಿಕ ದವಾಖಾನೆಗಳನ್ನು ಪ್ರಾರಂಭಿಸಿ‌ ಚಿಕಿತ್ಸೆ ನಿಡುತ್ತಿರುವ ನಕಲಿ ವೈದ್ಯರ ಮೇಲೆ ದಾಳಿ ಮಾಡಿದ ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ ಅವುಗಳನ್ನು ತೆರವುಗೊಳಿಸಿದರು.

ಇಂದು ಸಾಯಂಕಾಲ ನಕಲಿ ವೈದ್ಯರ ಹಾವಳಿ ಎಂಬ ಸುದ್ದಿ  ಪ್ರಕಟವಾಗಿತ್ತು. ಅದನ್ನು ಗಮನಿಸಿದ ತಾಲೂಕು ವೈದ್ಯಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ತೆರವು ಕಾರ್ಯಗೊಳಿಸಿದರು.

ತಾಲೂಕಾ ವೈದ್ಯಾಧಿಕಾರಿ ಮಹೇಶ ಚಿತ್ತರಗಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಸಿಬ್ಬಂದಿ ‌ಅರವಿಂದ ಮಾಳಗಿ‌ ಮತ್ತು ಸಿಬ್ಬಂದಿಗಳು ಸೇರಿದಂತೆ ಸ್ಥಳಿಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ