ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಕೊನೆಗೂ ಮುಹೂರ್ತ ನಿಗದಿ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ 20 ರವರೆಗೆ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ವಿಶೇಷ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಆದರೆ, ಇನ್ನೂ ದಿನಾಂಕ ಅಂತಿಮಗೊಂಡಿಲ್ಲ. ಅಧಿವೇಶದ ಸಂಬಂಧ ಪೂರ್ವಸಿದ್ಧತೆಯನ್ನು ಆರಂಭಿಸಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸ್ಪೀಕರ್ ಯುಟಿ ಖಾದರ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವರ್ಷವೂ ಅತ್ಯಂತ ಯಶಸ್ವಿಯಾಗಿ ಅಧಿವೇಶನ ನಡೆಸಲು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ವಿಶೇಷ ಅಧಿವೇಶನ ನಡೆಸಬಹುದಾಗಿದೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ಅಧಿವೇಶನಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಒಟ್ಟಾರೆ ಬೆಳಗಾವಿಯಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ವಿಶೇಷ ಅಧಿವೇಶನಕ್ಕೆ ಡಿಸೆಂಬರ್ ತಿಂಗಳ ಮುಹೂರ್ತ ನಿಗದಿಯಾಗಿದಂತಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.