Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಪಚುನಾವಣೆ : ಕೊನೆಗೂ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಬಾಗಲಕೋಟೆ ಕ್ಷೇತ್ರದಿಂದ ಉಮೇಶ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಕುಟುಂಬದ ಸಮರ್ಥ ಶಾಮನೂರು ಅವರಿಗೆ ಟಿಕೆಟ್‌ ನೀಡಲಾಗಿದೆ. ​​

ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಸಭೆಗಳನ್ನು ನಡೆಸಿದ್ದರು. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸುರ್ಜೆವಾಲಾ ಅವರು ಸಹ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜೊತೆ ಸಭೆ ನಡೆಸಿದ್ದರು. ನಂತರ ಕೆಲ ಪ್ರಮುಖರ ಮನವೊಲಿಸಿದ ಕಾಂಗ್ರೆಸ್​​ ಅಂತಿಮವಾಗಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ಮೇರೆಗೆ ಕೆ ಸಿ ವೇಣುಗೋಪಾಲ ಅಧಿಕೃತ ಘೋಷಣೆ ಮಾಡಿದ್ದಾರೆ.

ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಮೇಟಿಯವರ ಮಕ್ಕಳಲ್ಲಿ ಟಿಕೆಟ್‌ಗಾಗಿ ತೀವ್ರ ಸ್ಪರ್ಧೆ ನಡೆದಿತ್ತು. ಈ ಪೈಕಿ ಮೇಟಿಯ ಕಿರಿಯ ಪುತ್ರ ಉಮೇಶ ಮೇಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.

ಶಾಮನೂರು ಶಿವಂಶಕರಪ್ಪ ಅವರ ನಿಧನದಿಂದ ತೆರವಾದ ದಾವಣೆಗೆರೆ ದಕ್ಷಿಣ ಕ್ಷೇತ್ರದಲ್ಲಿ ಪೈಪೋಟಿ ತೀವ್ರವಾಗಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ಮುಸ್ಲಿಂ ಮತಗಳು ಇರುವುದರಿಂದ ಮುಸ್ಲಿಂ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದರು.

ಸಚಿವ ಜಮೀರ್ ಅಹಮ್ಮದ್ ಮುಸ್ಲಿಂ ನಾಯಕರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್‌ ಹೈಕಾಂಡಿಗೆ ಒತ್ತಡ ಹೇರಿದ್ದರು. ಟಿಕೆಟ್ ಘೋಷಣೆಗೂ ಮೊದಲೇ ಶಾಮನೂರು ಶಿವಶಂಕಪ್ಪ ಅವರ ಮೊಮ್ಮಗ ಸಮರ್ಥ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಕೆ ಸಹ ಮಾಡಿದ್ದರು. ತೀವ್ರಗೊಂಡ ಸಮಸ್ಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಬಗೆಹರಿಸಿ ಸಮರ್ಥ ಅವರಿಗೆ ಟಿಕೆಟ್ ನೀಡಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆ