Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಜಗಳದ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಹಳೆ ನಿಜಗಲ್ ಬಳಿ ಅನಂತಕುಮಾರ ಹೆಗಡೆ ಅವರು ಕಾರಿನಲ್ಲಿ ಬರುತ್ತಿದ್ದಾಗ, ಅವರ್‌ ಕಾರನ್ನು ಓವರ್‌ ಟೇಕ್‌ ಮಾಡಿದ ಕಾರನ್ನು ನಿಲ್ಲಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನೊಂದು ಕಾರನ್ನು ಸೈಫ್ ಖಾನ್ ಎಂಬುವವರು ಚಲಾಯಿಸುತ್ತಿದ್ದು ಅವರ ಕಾರು ಅನಂತಕುಮಾರ ಹೆಗಡೆ ಅವರ ಕಾರನ್ನು ಓವರ್‌ ಟೇಕ್‌ ಮಾಡಿಕೊಂಡು ಮುಂದೆ ಹೋದ ನಂತರ ಇವರ ಮುಂದಕ್ಕೆ ಹೋಗಲು ದಾರಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಓವರ್ ಟೇಕ್ ಮಾಡಿ ಕಾರು ನಿಲ್ಲಿಸಿ ವಾಗ್ವಾದ ನಡೆದಿದ್ದು ವಿಕೋಪಕ್ಕೆ ಹೋಯಿತು ಎನ್ನಲಾಗಿದೆ.

ಹೆಗಡೆ ಅವರ ಕಾರು ಚಾಲಕ, ಸೈಫ್ ಖಾನ್ ಅವರ ಕಾರಿಗೆ ಎರಡು ಮೂರು ಬಾರಿ ಹಾರ್ನ್ ಮಾಡಿದ್ದರೂ ಸೈಫ್ ಖಾನ್ ಅದನ್ನು ಗಮನಿಸದೆ ಚಾಲನೆಯನ್ನು ಮುಂದುವರೆಸಿದರು. ಇದಕ್ಕೆ ಕೋಪದಿಂದ ಹೆಗಡೆ ಅವರ ಕಾರು ಚಾಲಕ ಎಸ್‌ಯುವಿಯನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಜಗಳ ನಡೆದಿದ್ದು, ಇದು ವಿಕೋಪಕ್ಕೆ ಹೋಗಿ, ಹೆಗಡೆ ಅವರ ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರೂ ಹೊರಬಂದು ಸೈಫ್ ಖಾನ್ ಮತ್ತು ಇತರ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸೈಫ್ ಖಾನ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ, ಕುಟುಂಬದವರ ಹೇಳಿಕೆಯನ್ನು ದಾಖಲಿಸಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಹಾಗೂ ಇತರರನ್ನು ನೆಲಮಂಗಲದ ಸಮೀಪದ ಡಿವೈಎಸ್‌ಪಿ ಕಚೇರಿಗೆ ಕರೆಯಿಸಿಕೊಂಡು ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎನ್ನಲಾಗಿದೆ. ಓವರ್​ ಟೇಕ್‌​ ವೇಳೆ ಕಾರಿಗೆ ಮತ್ತೊಂದು ಕಾರ್ ಟಚ್ ಆಗಿದ್ದಕ್ಕೆ ಗಲಾಟೆ ನಡೆದೆ ಎಂದು ತಿಳಿಸಿದ್ದಾರೆ. ತಾವು ಕಾರಿನಲ್ಲಿದ್ದೆ, ಹಲ್ಲೆ ಮಾಡಿಲ್ಲ ಎಂದೂ ಅವರು ತಿಳಿಸಿದ್ದಾರೆ ಎನ್ನಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ