Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಪ್ರಭಾವಿ ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿ ಮಧ್ಯರಾತ್ರಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ, ನಗರದ ಮಂಡೋಳಿ ರಸ್ತೆಯಲ್ಲಿರುವ ವಕೀಲೆಯೊಬ್ಬರ ಮನೆ ಮೇಲೆ ಫೈರಿಂಗ್ ಮಾಡಿದ ಆತಂಕಕಾರಿ ಘಟನೆ ಶನಿವಾರ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ 1 ರಿಂದ 2 ಗಂಟೆ ಸುಮಾರಿಗೆ ವಕೀಲೆ ಪೂಜಾ ಕಾಕತಕರ್ ಅವರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ.

ಮನೆಯ ಮೊದಲ ಮಹಡಿಯಲ್ಲಿ ವಕೀಲೆ ಪೂಜಾ ಕಾಕತಕರ್ ಅವರ ಪುತ್ರಿ ಓದುತ್ತಿದ್ದಳು. ಈ ವೇಳೆ ದಾಳಿ ನಡೆದಿದೆ. ಮನೆಯ ಗ್ಲಾಸ್ ಮೇಲೆ ಫೈರಿಂಗ್ ಮಾರ್ಕ್ ಬಿದ್ದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಪ್ರಭಾವಿ ವಕೀಲೆಯಾಗಿರುವ ಪೂಜಾ ಕಾಕತಕರ್​ ಅವರು ಕಳೆದ 18 ವರ್ಷಗಳಿಂದ ವಕೀಲೆ ವೃತ್ತಿ ಮಾಡುತ್ತಾ ಬಂದಿದ್ದು, ಹೈ ಪ್ರೊಫೈಲ್ ಕೇಸ್​ಗಳ ಪರ ವಾದ ಮಾಡುತ್ತಿದ್ದರು. ನಿನ್ನೆ ರಾತ್ರಿ ದುಷ್ಕರ್ಮಿಗಳು ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ನಂತರ ಪೂಜಾ ಕಾಕತಕರ್​ ಅವರ ಕುಟುಂಬಕ್ಕೆ ರಕ್ಷಣೆ ನೀಡುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನ