Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫುಟ್ಬಾಲ್ ದಿಗ್ಗಜ ಪೀಲೆ ನಿಧನ

 

ರಿಯೊ ಡಿ ಜನೈರೊ, ಬ್ರೆಜಿಲ್  :                    ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೀಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು.

ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು ಪೆಲೆ ಅವರ ಆಟವು ಪ್ರಮುಖವಾಗಿತ್ತು. ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು ಗಳಿಸಿದ (77) ಅವರ ದಾಖಲೆಯನ್ನು ಈಚೆಗೆ ನಡೆದ ವಿಶ್ವಕಪ್ ಟೂರ್ನಿಯಲ್ಲಿ ನೇಮರ್ ಸರಿಗಟ್ಟಿದ್ದರು.

‘ಪೆಲೆಗೆ ನೀಡುತ್ತಿರುವ ಕಿಮೊಥೆರಪಿ ಪರಿಣಾಮ ಬೀರುತ್ತಿಲ್ಲ. ಆದ್ದರಿಂದ ಅವರನ್ನು ಪ್ಯಾಲೆಟಿವ್‌ ಕೇರ್‌ ವಿಭಾಗದಲ್ಲಿ ದಾಖಲಿಸಲಾಗಿದೆ’ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಅದನ್ನು ಕುಟುಂಬದ ಸದಸ್ಯರು ಅಲ್ಲಗಳೆದಿದ್ದರು.

ನವೆಂಬರ್‌ ಕೊನೆಯ ವಾರದಲ್ಲಿ ಪೆಲೆ ಅಲ್ಬರ್ಟ್‌ ಐನ್‌ಸ್ಟೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕರುಳಿನ ಕ್ಯಾನ್ಸರ್‌ ಉಲ್ಬಣಿಸಿದ್ದು ಮೂತ್ರಪಿಂಡ ಮತ್ತು ಹೃದಯಕ್ಕೆ ಸೋಂಕು ವ್ಯಾಪಿಸಿದೆ ಎಂದು ಈಚೆಗೆ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. 1957ರಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅವರು ವೃತ್ತಿಜೀವನದಲ್ಲಿ 1000ಕ್ಕೂ ಹೆಚ್ಚು ಗೋಲುಗಳನ್ನು ದಾಖಲಿಸಿದ್ದರು. 1977ರಲ್ಲಿ ನಿವೃತ್ತರಾಗಿದ್ದರು.

ಫಾರ್ವರ್ಡ್ ಮತ್ತು ಅಟ್ಯಾಕಿಂಗ್ ಮಿಡ್‌ಫೀಲ್ಡರ್ ಆಟಗಾರರಾಗಿದ್ದ ಪೆಲೆ, 1995–1998ರ ಅವಧಿಯಲ್ಲಿ ದೇಶದ ಕ್ರೀಡಾ ಸಚಿವರಾಗಿದ್ದರು. ವಿಶ್ವಕಪ್ ಟೂರ್ನಿಗಳ 14 ಪಂದ್ಯಗಳಲ್ಲಿ 12 ಗೋಲುಗಳನ್ನು ಗಳಿಸಿದ್ದರು. ಪ್ರಮುಖವಾಗಿ ಸ್ಯಾಂಟೊಸ್‌ ಮತ್ತು ನ್ಯೂಯಾರ್ಕ್ ಕಾಸ್ಮೊಸ್‌ ಕ್ಲಬ್‌ಗಳಿಗೆ ಆಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ