Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೇಪಾಳದಲ್ಲಿ ಇಂದು ನೂತನ ಸಚಿವ ಸಂಪುಟ ರಚನೆ

ಕಠ್ಮಂಡು : ನೇಪಾಳದ ನೂತನ ಹಂಗಾಮಿ ಪ್ರಧಾನಿ ಆಗಿರುವ ಸುಶೀಲಾ ಕಾರ್ಕಿ ಅವರು ಗೃಹ ಸಚಿವರು, ವಿದೇಶಾಂಗ ಹಾಗೂ ರಕ್ಷಣಾ ಸಚಿವರು ಸೇರಿದಂತೆ ಕೆಲವೇ ಸಚಿವರನ್ನು ಒಳಗೊಂಡ ಸಂಪುಟವನ್ನು ಭಾನುವಾರ ರಚಿಸಲಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮೂಲಗಳು ತಿಳಿಸಿವೆ.

'ಜೆನ್‌-ಝೀ' ಪ್ರತಿಭಟನೆ ವೇಳೆ ಪ್ರಧಾನಿ ಕಚೇರಿಯ ಕಟ್ಟಡವೂ ಬೆಂಕಿಗೆ ಆಹುತಿಯಾಗಿರುವ ಕಾರಣ ಸಿಂಗದರ್ಬಾರ್ ಸಂಕೀರ್ಣದಲ್ಲಿ ಗೃಹ ಸಚಿವಾಲಯಕ್ಕಾಗಿ ನೂತನವಾಗಿ ನಿರ್ಮಿಸಿರುವ ಕಚೇರಿಯನ್ನೇ ಪ್ರಧಾನಿ ಕಚೇರಿಯನ್ನಾಗಿ ಮಾರ್ಪಾಡು ಮಾಡಲಾಗುತ್ತಿದೆ ಎಂದೂ ತಿಳಿದುಬಂದಿದೆ.

ಮಾರ್ಚ್‌ 5ಕ್ಕೆ ಚುನಾವಣೆ:
ನೇಪಾಳದ ಮುಂದಿನ ಸಾರ್ವತ್ರಿಕ ಚುನಾವಣೆಯು 2026ರ ಮಾರ್ಚ್ 5ರಂದು ನಡೆಯಲಿದೆ ಎಂದು ಅಧ್ಯಕ್ಷ ರಾಮಚಂದ್ರ ಪೌದಲ್ ಅವರ ಕಚೇರಿಯು ಘೋಷಿಸಿದೆ.

ಹಂಗಾಮಿ ಪ್ರಧಾನಿ ಸುಶೀಲಾ ಕಾರ್ಕಿ ಅವರ ಶಿಫಾರಸಿನ ಮೇರೆಗೆ ಶುಕ್ರವಾರ ತಡರಾತ್ರಿಯೇ ಸಂಸತ್ತನ್ನು ಅಧ್ಯಕ್ಷ ಪೌದೆಲ್ ವಿಸರ್ಜಿಸಿದ್ದರು.

ಇದಕ್ಕೆ ಸಂಬಂಧಿಸಿದಂತೆ ಅಧ್ಯಕ್ಷರ ಕಚೇರಿಯು ಪ್ರಕಟಣೆ ಹೊರಡಿಸಿದೆ. ' 2025ರ ಸೆಪ್ಟೆಂಬರ್ 12ರ ರಾತ್ರಿ 11 ರಿಂದ ಅನ್ವಯವಾಗುವಂತೆ ಸಂಸತ್ ಅನ್ನು ವಿಸರ್ಜಿಸಲಾಗುತ್ತಿದ್ದು, 2026ರ ಮಾರ್ಚ್ 5ಕ್ಕೆ ಸಾರ್ವತ್ರಿಕ ಚುನಾವಣೆಯನ್ನು ನಿಗದಿ ಪಡಿಸಲಾಗಿದೆ' ಎಂದು ಪ್ರಕಟಣೆ ತಿಳಿಸಿದೆ.

ಸಂಸತ್‌ ವಿಸರ್ಜನೆ ಅಸಂವಿಧಾನಿಕ: ರಾತ್ರೋರಾತ್ರಿ ಸಂಸತ್ತನ್ನು ವಿಸರ್ಜಿಸಿರುವ ನೇಪಾಳದ ಅಧ್ಯಕ್ಷರ ತೀರ್ಮಾನವನ್ನು ಇಲ್ಲಿನ ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ವಕೀಲರ ಸಂಘಟನೆಗಳು ಖಂಡಿಸಿದ್ದು, ಇದು ಅಸಂವಿಧಾನಿಕ ನಡೆ ಹಾಗೂ ನಿರಂಕುಶಾಧಿಕಾರದ ಪ್ರತೀಕ ಎಂದು ಆರೋಪಿಸಿವೆ.

ಕಠ್ಮಂಡುವಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿಗೀಡಾದವರ ಸ್ಮರಣಾರ್ಥ ಜನರು ಶನಿವಾರ ಮೇಣದ ಬತ್ತಿ ಬೆಳಗಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!