Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

ಬೆಂಗಳೂರು :
ರಾಜ್ಯ ಸರ್ಕಾರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದ್ದು, ಇದಕ್ಕಾಗಿ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನು ರದ್ದು ಪಡಿಸಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರ, ತಿದ್ದುಪಡಿಗೂ ಮೊದಲಿದ್ದ ಪಠ್ಯ ಕ್ರಮವನ್ನು ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಅದಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿಗಳು ನೀಡುವ ಪರಿಷ್ಕರಣಾ ವರದಿ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

 

ಸಮಿತಿಗಳ ಅಧ್ಯಕ್ಷರ ವಿವರ:
ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾ ಕಾಲೇಜು-ತೀರ್ಥಹಳ್ಳಿ.
ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ, ಉಪನ್ಯಾಸಕ-ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು.
ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ.
6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ
8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ-ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ