Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ

ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ್

ಹುಬ್ಬಳ್ಳಿ:
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದಾರೆ. ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ(ಏಪ್ರಿಲ್ 15) ರಾತ್ರಿ ಜಗದೀಶ ಶೆಟ್ಟರ್​ ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಅದು ವಿಫಲವಾಗಿದ್ದು, ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಣೆ ಮಾಡಿದ್ದು, ಭಾನುವಾರ ಬೆಳಿಗ್ಗೆ ಶಿರಸಿಗೆ ತೆರಳಿ ಸ್ಪೀಕರ್‌ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸುತ್ತೇನೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಶನಿವಾರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ನಡೆದ ಸಂಧಾನ ಸಭೆ ವಿಫಲವಾದ ಬಳಿಕ ಮಾತನಾಡಿದ ಜಗದೀಶ​ ಶೆಟ್ಟರ್ ಅವರು​, ನನ್ನನ್ನು ಬಿಜೆಪಿ ನಾಯಕರು ನಡೆಸಿಕೊಂಡಿರುವ ರೀತಿ ನನಗೆ ನೋವು ತಂದಿದೆ. ಓರ್ವ ಹಿರಿಯ ನಾಯಕನಿಗೆ ಹೀಗೆ ಮಾಡಿದರೆ ಏನು ಹೇಳಬೇಕು ಎಂಬುದು ನನಗೆ ತಿಳಿಯುತ್ತಿಲ್ಲ. ನಾನು ಯಾವುದೇ ಸಚಿವ ಸ್ಥಾನ, ಮುಖ್ಯಮಂತ್ರಿ ಸ್ಥಾನ, ಉನ್ನತ ಸ್ಥಾನವನ್ನು ಕೇಳುವುದಿಲ್ಲ. ನನಗೆ ಕ್ಷೇತ್ರದ ಜನರ ಸೇವೆ ಮಾಡಲು ಕೇವಲ ಶಾಸಕನಾಗಿ ಇರುತ್ತೇನೆ ಎಂದು ಮನವಿ ಮಾಡಿದರೂ ಅವರು ಒಪ್ಪಿಗೆ ಸೂಚಿಸಿಲ್ಲ. ಇದು ನನ್ನ 40 ವರ್ಷಗಳ ರಾಜಕೀಯ ದಿನದಲ್ಲಿ ಕರಾಳ ದಿನವಾಗಿದೆ. ನಾನು ಚುನಾವಣೆಗೆ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಈ ಬಗ್ಗೆ ರಾಜೀನಾಮೆ ಸಲ್ಲಿಸಿದ ನಂತರ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಹಿರಿಯರಾದ ಯಡಿಯೂರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿಯಲ್ಲಿ ನಂತರದ ಹಿರಿಯ ನಾಯಕ ನಾನು. ಹೀಗಾಗಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇವೆ ಎಂದು ಹೇಳುತ್ತಾರೆ. ಆದರೆ ಶೆಟ್ಟರಗೆ ಇಲ್ಲ ಎಂದು ಹೇಳುತ್ತಾರೆ. ಇದರ ಅರ್ಥ ಏನು ಎಂಬುದು ಅರ್ಥವಾಗಿಲ್ಲ. ಇದರ ಹಿಂದೆ ಯಾರ ಮಾಡಿದಾರೆ ಎಂಬುದನ್ನು ಈಗ ನಾನು ಹೇಳುವುದಿಲ್ಲ ಎಂದು ಹೇಳಿದರು. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ