Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಸಿಎಂ ಎಸ್‌ಎಂ ಕೃಷ್ಣ ವಿಧಿವಶ

ಬೆಂಗಳೂರು: ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯವಿಧಿವಶ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ