Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಸಚಿವ ಮನೋಹರ ತಹಶೀಲ್ದಾರ ನಿಧನ

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ.
2015 ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.

4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮನೋಹರ್‌ ತಹಶೀಲ್ದಾರ, ಬಿಇ ಪದವೀಧರರಾಗಿದ್ದರು. ಹಿಂದೆ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ತಹಶೀಲ್ದಾರ ಅವರು ವಿಧಾನಸಭೆ ಉಪ ಸಭಾಪತಿ ಆಗಿದ್ದರು. 1978 ರಲ್ಲಿ ಮೊದಲ ಬಾರಿಗೆ ಹಾನಗಲ್‌ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ನಂತರ 1989, 1999, 2013 ಹೀಗೆ 4 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಪಾರ್ಥಿವ ಶರೀರವನ್ನು ಇಂದು, ಗುರುವಾರ ಮಧ್ಯಾಹ್ನ ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ