Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೀದರ: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

ಬೀದ‌ರ್: ವೀರಶೈವ ಲಿಂಗಾಯತ ಸಮಾಜದ ಅತ್ಯಂತ ಪ್ರಮುಖ ನಾಯಕರಾಗಿದ್ದ ಭೀಮಣ್ಣ ಖಂಡ್ರೆ ನಿಧನರಾಗಿದ್ದು, ಅವರು ಇಡೀ ರಾಜ್ಯ ಕಂಡ ಧೀಮಂತ ವ್ಯಕ್ತಿ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಶತಾಯುಷಿಯಾಗಿದ್ದ ಅವರು ಬಹುಕಾಲ ಸಮಾಜ ಸೇವೆ ಹಾಗೂ ಸಚಿವರಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಜನಪ್ರಿಯ ನಾಯಕರಾಗಿ ಭೀಮಣ್ಣ ಖಂಡ್ರೆ ಹೆಸರುವಾಸಿಯಾಗಿದ್ದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕಗಳ ಮೂಲಕ ಒಂದು ವಾರ ಬೀದ‌ರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಸತತವಾಗಿ ಆರೋಗ್ಯ ಕ್ಷೀಣಿಸಿದ ಕಾರಣ ಸೋಮವಾರ (ಜ.12) ಅವರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ ತಂಡ ಅವರನ್ನು ಉಪಚರಿಸುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಶುಕ್ರವಾರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ರಾತ್ರಿ ನಿಧನರಾದರು. ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಮೊಮ್ಮಗ ಸಾಗರ ಖಂಡ್ರೆ ಸೇರಿದಂತೆ ಕುಟುಂಬ ಸದಸ್ಯರು ಎಲ್ಲಾ ರೀತಿಯ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲಿಯೇ ಉಳಿದುಕೊಂಡಿದ್ದರು.

ಖಂಡ್ರೆಯವರ ಆರೋಗ್ಯದಲ್ಲಿ ಏರುಪೇರಾದ ವಿಷಯ ತಿಳಿದು ವಿವಿಧ ಮಠಾಧೀಶರು, ಸಚಿವರು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ಅವರ ಬೆಂಬಲಿಗರು ಕಳೆದ ಹಲವು ದಿನಗಳಿಂದ ಅವರ ಮನೆಗೆ ಭೇಟಿ ನೀಡುತ್ತಿದ್ದರು.

ಭೀಮಣ್ಣ ಖಂಡ್ರೆಯವರಿಗೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐದು ಜನ ಪುತ್ರಿಯರು ಇದ್ದಾರೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆ, ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಆವರು ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದಾರೆ.

ನಾಲ್ಕು ಸಲ ಶಾಸಕರಾಗಿ, ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು.

ಶನಿವಾರ ಅಂತ್ಯಕ್ರಿಯೆ

ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಶನಿವಾರ (ಜ.17) ನೆರವೇರಲಿದೆ ಎಂದು ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ ಭಾಲ್ಕಿ ಹೊರವಲಯದ ಚಿಕಲಚಂದಾ ಗ್ರಾಮ ಸಮೀಪದ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ದಿವಂಗತ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ