Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಸಚಿವ ಸೋಮಶೇಖರ, ವಕ್ಫ್ ಬೋರ್ಡ್ ಅಧ್ಯಕ್ಷ ಸೇಠ್ ಕಾಂಗ್ರೆಸ್ ಸೇರ್ಪಡೆ

 

 

ಬೆಂಗಳೂರು :
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಬಿ. ಸೋಮಶೇಖರ್, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಆಸಿಫ್ ಸೇಠ್, ಅಬ್ದುಲ್ ಅಜೀಜ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಲವು ನಾಯಕರನ್ನು ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ನರೇಂದ್ರಸ್ವಾಮಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು :

ಇಂದು ಬಿಜೆಪಿ ಹಾಗೂ ದಳವನ್ನು ತೊರೆದು ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿ, ಮೈಸೂರು ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಬದಲಾವಣೆ ಬಯಸಿದ್ದಾರೆ. ವಿ. ಸೋಮಶೇಖರ್ ಅವರು ಸಿದ್ದರಾಮಯ್ಯ ಅವರ ಜತೆ ಶಾಸಕರಾಗಿ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರದೇ ಆದ ಸಾಧನೆ ಮಾಡಿದ್ದಾರೆ.

ಬಿಜೆಪಿ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನಮ್ಮಂತಹವರಿಗೆ ಬಿಜೆಪಿಯಲ್ಲಿ ಸ್ಥಾನವಿಲ್ಲ. ದೇಶದ ಹಿತಕ್ಕಾಗಿ ಯಾವುದೇ ಷರತ್ತು ಇಲ್ಲದೆ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಹಾಗೂ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದಾರೆ. ಅವರನ್ನು ತುಂಬು ಹೃದಯದಿಂದ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ.

ಬಿಜೆಪಿ ಸರ್ಕಾರ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದ ಆಸೀಫ್ ಸೇಠ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮ ನೀಡಿ ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಬಹಳ ತೊಂದರೆ ಆಗಿದೆ. ಇಷ್ಟೆಲ್ಲಾ ಆದ ನಂತರ ನಾನು ಯಾವ ಮುಖ ಇಟ್ಟುಕೊಂಡು ಬಿಜೆಪಿಯಲ್ಲಿ ಮುಂದುವರಿಯಲಿ ಎಂದು ನಮ್ಮ ಜತೆ ಚರ್ಚೆ ಮಾಡಿ ಕಾಂಗ್ರೆಸ್ ಸೇರುತ್ತಿದ್ದಾರೆ.

ಬಸವೇಗೌಡರು ಮೂಡಾ ಅಧ್ಯಕ್ಷರಾಗಿದ್ದರು, ಅವರು ಅನೇಕ ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರೂ ಕೂಡ ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ.

ಅಬ್ದುಲ್ ಅಜೀಜ್ ಅವರು 2018 ರಲ್ಲಿ ದಳದ ಅಭ್ಯರ್ಥಿಯಾಗಿದ್ದರು. ಅವರು ಕೂಡ ಇಂದು ಬೇಷರತ್ತಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಹೀಗೆ ಅನೇಕ ನಾಯಕರು ಪಕ್ಷ ಸೇರುತ್ತಿದ್ದು, ನಾವು ಎಲ್ಲಾ ನಾಯಕರನ್ನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ.

ಇದಕ್ಕೂ ಮುನ್ನ ಸದಾಶಿವನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ನೀಂತರೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಯಾರು ಏನಾದರೂ ಹೇಳಿಕೊಳ್ಳಲಿ. ಅಲ್ಪಸಂಖ್ಯಾತರೂ ಸೇರಿದಂತೆ ನಮ್ಮ ಪಕ್ಷಕ್ಕೆ ಎಲ್ಲಾ ಸಮುದಾಯದವರು ಬೇಕು. ರಾಜ್ಯದಲ್ಲಿ ಶೇ.99ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ಸಿಗೆ ಬೆಂಬಲ ನೀಡುತ್ತಿದ್ದಾರೆ. ಈ ಭಾಗದಲ್ಲಿ ಕಳೆದ 4 ಬಾರಿಯಿಂದಲೂ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುತ್ತಾ ಬಂದಿದ್ದು, ಈಗಲೂ ನೀಡಿದ್ದೇವೆ. ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಕೇಳಿದ ಹಿನ್ನೆಲೆಯಲ್ಲಿ ಅಭ್ಯರ್ಥಿ ಬದಲಿಸಿದ್ದೇವೆ’ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ