Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ, ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

ಬಳ್ಳಾರಿ: ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್. ತಿಪ್ಪಣ್ಣ (97) ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದರು.

ತಿಪ್ಪಣ್ಣ ಅವರಿಗೆ ಒಬ್ಬ ಪುತ್ರ ಇದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಶನಿವಾರ, ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿದ್ದ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು.

ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ತಿಪ್ಪಣ್ಣ ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದಾರೆ.

2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ತಿಪ್ಪಣ್ಣ ಆಯ್ಕೆಯಾಗಿದ್ದರು. ಇದಕ್ಕೂ ಹಿಂದೆಯೂ ಅವರು ಮಹಾಸಭಾದ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸಿದ್ದರು. ಬಳ್ಳಾರಿಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆಗಳಲ್ಲಿ ಅವರು 20 ವರ್ಷ ಕೆಲಸ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ