Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

₹2000ನೋಟು ಬದಲಾವಣೆ ಹೆಸರಿನ ವಂಚಕರು ಪೊಲೀಸ್ ಅತಿಥಿಗಳು

ಕಳ್ಳ ಪೊಲೀಸ್ ಸಾಗರ ಜಾಧವ ಸಹ ಭಾಗಿ

ಬೆಳಗಾವಿ: ₹500ನೋಟುಗಳನ್ನು ಕೊಟ್ಟರೆ ಅದರ ದುಪ್ಪಟ್ಟು ಹಣ ₹2000ಮುಖಬೆಲೆಯ ನೋಟುಗಳನ್ನು ಕೊಡುವುದಾಗಿ ವಂಚಿಸಿದ್ದ ತಂಡವನ್ನು ಬೆಳಗಾವಿ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಲ್ಲಿ ಮಿರಜ್ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸಟೇಬಲ್ ಸಾಗರ ಸದಾಶಿವ ಜಾಧವ ಸಹ ಇರುವುದು ಕಳವಳಕಾರಿ.

ಸಾಂಗಲಿ ತಾಸಗಾಂವ ನಿವಾಸಿ ಸಮೀರ ಭಾನುದಾಸ ಭೋಸಲೆ ಎಂಬುವವರು ಕಾಗವಾಡ ಠಾಣೆಗೆ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರಿಗೆ 'ಕಳ್ಳ ಪೊಲೀಸ್ ಸಾಗರ ಜಾಧವ' ಸಹ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.

ಮೇ. 31ರ ರಾತ್ರಿ 8ಕ್ಕೆ ದೂರುದಾರರಾದ ಸಮೀರ ಅವರಿಗೆ ಆಗುಂತಕರು ಫೋನ್ ಮಾಡಿ ₹500ಮುಖಬೆಲೆಯ 5ಲಕ್ಷ ಹಣ ತಂದು ಕೊಟ್ಟರೆ, ₹2000ಮುಖಬೆಲೆಯ 6ಲಕ್ಷ ಕೊಡುವುದಾಗಿ ನಂಬಿಸಿ, ಹಣ ಪಡೆದು ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಪರಾರಿಯಾದ ಬಗ್ಗೆ ದೂರು ನೀಡಿದ್ದರು.

ಪ್ರಕರಣ ಬೆನ್ನತ್ತಿದ ಪೊಲೀಸರಿಗೆ ಈಗ ನಾಲ್ವರ ಪೈಕಿ ಮೂವರು ಸೆರೆ ಸಿಕ್ಕಿದ್ದು, ಕಾಗವಾಡ ಪೊಲೀಸರು ನೆರೆಯ ಮಹಾರಾಷ್ಟ್ರದಲ್ಲಿ ಜಾಲಾಡಿ ಮೂವರನ್ನು ಬಂಧಿಸಿದ್ದಾರೆ.

ಎಸ್ಪಿ ಮನವಿ:
₹2000ಮುಖಬೆಲೆಯ ನೋಟುಗಳನ್ನು ಹೊಂದಿದ್ದವರು ನೇರವಾಗಿ ಬ್ಯಾಂಕಗಳಿಗೆ ಹೋಗಿ ಕೊಟ್ಟು, ಬೇರೆ ಹಣ ಪಡೆಯಲು ಕಾನೂನಾತ್ಮಕವಾಗಿ ಅವಕಾಶ ಇದೆ. ಎರಡು ಸಾವಿರ ನೋಟು ಹೊಂದಿದವರು ಅಳುಕಿಲ್ಲದೇ ಬ್ಯಾಂಕಿಗೆ ಹೋಗಿ ಕೊಡಿ. ನೋಟು ಬದಲಾವಣೆ ಮಾಡಿಕೊಡುವುದಾಗಿ ಹೇಳುವ ವಂಚಕರಿಗೆ ಬಲಿಯಾಗಬೇಡಿ ಎಂದು ಡಾ. ಸಂಜೀವ ಪಾಟೀಲ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ