Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SSLC ಪರೀಕ್ಷೆ : KSRTCಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ

ಬೆಂಗಳೂರು : ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನುತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು
ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ
ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ