Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶುಕ್ರವಾರ ಮತ ಎಣಿಕೆ : ದೆಹಲಿ ಚುನಾವಣೆ | ಗುರುವಾರ ಹೊರಬಿದ್ದ 3 ಪ್ರಮುಖ ಎಕ್ಸಿಟ್ ಪೋಲ್‌ಗಳು ; ಬಹುಮತ ಬಿಜೆಪಿಗೋ, ಎಎಪಿಗೋ..?

 

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಮತ್ತೆ ಮೂರು ಎಕ್ಸಿಟ್ ಪೋಲ್‌ಗಳು ಶುಕ್ರವಾರ ಹೊರಬಿದ್ದಿದ್ದು, ಮೂರೂ ಸಮೀಕ್ಷೆಗಳು ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೇಳಿದೆ.
ಬುಧವಾರ 11 ಎಕ್ಸಿಟ್‌ ಪೋಲ್‌ಗಳಲ್ಲಿ 9 ಎಕ್ಸಿಟ್‌ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆಯಬಹುದು ಎಂದು ಹೇಳಿದ್ದವು. ಎರಡು ಸಮೀಕ್ಷೆಗಳು ಆಮ್‌ ಆದ್ಮಿ ಪಾರ್ಟಿ ಅಧಿಕಾರ ಉಳಿಸಿಕೊಳ್ಳಬಹುದು ಎಂದು ಹೇಳಿದ್ದವು. ಗುರುವಾರ ಹೊರಬಿದ್ದ ಮೂರೂ ಸಮೀಕ್ಷೆಗಳು ಬಿಜೆಪಿ ಸ್ಪಷ್ಟಬಹುಮತ ಪಡೆಯಬಹುದು ಎಂದು ಹೇಳಿವೆ. ಹಿಂದಿನ ಚುನಾವಣೆಯಂತೆಯೇ ಕಾಂಗ್ರೆಸ್ ಮತ್ತೊಂದು ನೀರಸ ಪ್ರದರ್ಶನ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಗುರುವಾರ, ಆಕ್ಸಿಸ್ ಮೈ ಇಂಡಿಯಾ, ಸಿಎನ್‌ಎಕ್ಸ್ ಹಾಗೂ ಟುಡೇʼಸ್‌ ಚಾಣಕ್ಯ ಈ ಮೂರು ಎಕ್ಸಿಟ್‌ ಪೋಲ್‌ಗಳು ಬಿಜೆಪಿಗೆ ಭಾರಿ ಗೆಲುವು ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಲಿದೆ ಎಂದು ಭವಿಷ್ಯ ನುಡಿದಿವೆ. ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸಮೀಕ್ಷೆಯ ಪ್ರಕಾರ, ದೆಹಲಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನಂಬರ್‌ 1 ಆಯ್ಕೆಯಾಗಿದ್ದಾರೆ. ಬಿಜೆಪಿಯ ಪರ್ವೇಶ ವರ್ಮಾ ಮತ್ತು ಮನೋಜ ತಿವಾರಿ ಅವರು ಪ್ರಮುಖ ಪಾತ್ರಕ್ಕಾಗಿ ಎರಡನೇ ಮತ್ತು ಮೂರನೇ ಆದ್ಯತೆಯ ಅಭ್ಯರ್ಥಿಗಳಾಗಿದ್ದಾರೆ.
ಆಕ್ಸಿಸ್ ಮೈ ಇಂಡಿಯಾದ ಎಕ್ಸಿಟ್‌ ಪೋಲ್‌ ಪ್ರೊಜೆಕ್ಷನ್‌
ಬಿಜೆಪಿ+ 45-55 (48%ರಷ್ಟು ಮತಗಳು)
ಎಎಪಿ – 15-25 (42%ರಷ್ಟು ಮತಗಳು)
ಕಾಂಗ್ರೆಸ್ 0-1 (07%ರಷ್ಟು ಮತಗಳು)
ಇತರೆ 0-1 (03%ರಷ್ಟು ಮತಗಳು)
ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.
CNX ನ ಎಕ್ಸಿಟ್‌ ಪೋಲ್‌ ಪ್ರೊಜೆಕ್ಷನ್‌
ಬಿಜೆಪಿ : 49-61 (49.05%ರಷ್ಟು ಮತಗಳು)
ಎಎಪಿ : 10-19 (41.52%ರಷ್ಟು ಮತಗಳು)
ಕಾಂಗ್ರೆಸ್ : 0-1 (5.37%ರಷ್ಟು ಮತಗಳು)
ಇತರೆ : 0-1 (4.06%ರಷ್ಟು ಮತಗಳು)
ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.
ಟುಡೇʼಸ್‌ ಚಾಣಕ್ಯ ಎಕ್ಸಿಟ್‌ ಪೋಲ್‌ ಪ್ರಾಜೆಕ್ಷನ್‌
ಬಿಜೆಪಿ : 51± 6
ಎಎಪಿ : 19 ± 6
ಇತರೆ : 0 ± 3
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ