Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜು.1ರಿಂದ ಕೆಲ ಅಗ್ಗದ ಮದ್ಯ ಮತ್ತಷ್ಟು ದುಬಾರಿ, ಕೆಲ ಮದ್ಯ ಅಗ್ಗ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಂತೆ ನೆರೆ ಹೊರೆಯ ರಾಜ್ಯಗಳ ಮದ್ಯದ ಬೆಲೆಯನ್ನು ಪರಿಗಣಿಸಿ ದರ ಪರಿಷ್ಕರಿಸಲು ಅಬಕಾರಿ ಇಲಾಖೆಯು ಕರಡು ಅಧಿಸೂಚನೆ ಪ್ರಕಟಿಸಿದ್ದು, ಜು.1 ರಿಂದ ಪರಿಷ್ಕೃತ ದರ ಜಾರಿಯಾಗಲಿವೆ. ಇದರನ್ವಯ ಅಗ್ಗದ ಕೆಲ ಮದ್ಯಗಳು ದುಬಾರಿಯಾಗಲಿದ್ದರೆ, ದುಬಾರಿ ಮದ್ಯಗಳು ಸ್ವಲ್ಪ ಅಗ್ಗವಾಗಲಿವೆ.

ನೆರೆಯ ರಾಜ್ಯಗಳಲ್ಲಿ ಕಡಿಮೆ ಬೆಲೆಯ ಮದ್ಯಗಳ ಮೊದಲ ಕೆಲ ಲ್ಯಾಬ್‌ಗಳ ದರ ಹೆಚ್ಚಳವಾಗಿದೆ. ಆದರೆ ಕರ್ನಾಟಕದಲ್ಲಿ ಬೆಲೆ ಕಡಿಮೆ ಇದೆ. ಇನ್ನು ದುಬಾರಿ ಮದ್ಯಗಳ ಬೆಲೆ ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಹೆಚ್ಚಾಗಿದೆ. ಆದ್ದರಿಂದ ನೆರೆ ರಾಜ್ಯಗಳ ಮದ್ಯದ ದರವನ್ನು ಪರಿಗಣಿಸಿ ಸಮತೋಲನ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಅದರಂತೆ ಇದೀಗ ಜು.1 ರಿಂದ ಪರಿಷ್ಕೃತ ದರಗಳು ಅನ್ವಯವಾಗಲಿವೆ.

ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಸರ್ಕಾರ ಇಳಿಕೆ ಮಾಡಲಿದ್ದು, ಜುಲೈ 1ರಿಂದ ಭಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ.

ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಸತತವಾಗಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಹೆಚ್ಚಿಸುತ್ತಾ ಬಂದಿತ್ತು. 2023ರ ಜುಲೈನಲ್ಲಿ ಭಾರತೀಯ ಉತ್ಪಾದಿತ ಮದ್ಯದ ಮೇಲಿನ ಎಇಡಿ ಹೆಚ್ಚಿಸಿದ್ದರೆ, 2024ರ ಜನವರಿಯಲ್ಲಿ ಬಿಯರ್ ಮೇಲಿನ ಎಇಡಿ ಹೆಚ್ಚಿಸಲಾಗಿತ್ತು. ಇದೇ ಮೊದಲ ಬಾರಿಗೆ ಎಇಡಿ ಕಡಿಮೆ ಮಾಡುವ ನಿರ್ಧಾರವನ್ನು ಕೈಗೊಂಡಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ಪ್ರಮಾಣ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ.

ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ. ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ.

ನೆರೆಯ ರಾಜ್ಯಗಳಲ್ಲಿನ ಮದ್ಯ ದರಗಳಿಗೆ ಸಮೀಪಿಸುವಂತೆ ರಾಜ್ಯದಲ್ಲೂ ಮದ್ಯದ ದರ ಪರಿಷ್ಕರಿಸಲು ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) ನಿಯಮಗಳು- 1968ಕ್ಕೆ ತಿದ್ದುಪಡಿ ತರಲು ಮಂಗಳವಾರ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಜುಲೈ 1ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ.
ಫ್ಲ್ಯಾಬ್‌ಗಳ ಸಂಖ್ಯೆ ಇಳಿಕೆ: ರಾಜ್ಯದಲ್ಲಿ ಈವರೆಗೆ 18 ಫ್ಲ್ಯಾಬ್‌ಗಳಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ವಿಧಿಸಲಾಗುತ್ತಿತ್ತು. ಈಗ ಫ್ಲ್ಯಾಬ್‌ಗಳ ಸಂಖ್ಯೆಯನ್ನು 16ಕ್ಕೆ ಇಳಿಕೆ ಮಾಡಲಾಗಿದೆ.

ಪ್ರತಿ ಬಲ್ಕ್ ಲೀಟ‌ರ್ ಮದ್ಯದ ಘೋಷಿತ ಉತ್ಪಾದನಾ ದರ ₹449 ಮೊದಲ ಫ್ಲ್ಯಾಬ್‌ನಲ್ಲಿದ್ದರೆ, 15,001ರಿಂದ ಮೇಲಿನ ಘೋಷಿತ ದರದ ಎಲ್ಲ ಮದ್ಯಗಳನ್ನು 18ನೇ ಫ್ಲ್ಯಾಬ್‌ನಲ್ಲಿಡಲಾಗಿತ್ತು. ಪರಿಷ್ಕೃತ ಪಟ್ಟಿಯ ಪ್ರಕಾರ, ಪ್ರತಿ ಬಲ್ಕ್ ಲೀಟರ್‌ನ ಘೋಷಿತ ಉತ್ಪಾದನಾ ದರ ₹450 ಹೊಂದಿರುವ ಮದ್ಯ ಮೊದಲ ಸ್ಪ್ಯಾಬ್‌ನಲ್ಲಿದ್ದರೆ, ₹20,001 ಮತ್ತು ಅದಕ್ಕಿಂತ ಹೆಚ್ಚಿನ ಘೋಷಿತ ಉತ್ಪಾದನಾ ದರ ಹೊಂದಿರುವ ಮದ್ಯವನ್ನು 16ನೇ ಫ್ಲ್ಯಾಬ್‌ಗೆ ಸೇರಿಸಲಾಗಿದೆ. ದರ ಇಳಿಕೆ ಕಾರಣದಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಲ್ಲಿ ಗಣನೀಯ ಪ್ರಮಾಣದ ಹೆಚ್ಚಳ ಆಗಬಹುದು. ಇದರಿಂದ ಈಗ ಸಂಗ್ರಹವಾಗುವುದಕ್ಕಿಂತಲೂ ಹೆಚ್ಚು ಅಬಕಾರಿ ತೆರಿಗೆ ಬೊಕ್ಕಸಕ್ಕೆ ಬರಬಹುದು ಎಂಬ ನಿರೀಕ್ಷೆ ಅಬಕಾರಿ ಇಲಾಖೆ ಅಧಿಕಾರಿಗಳಲ್ಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ