Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫಲಪುಷ್ಪ ಪ್ರದರ್ಶನ: 18 ರಿಂದ

 

ಬೆಳಗಾವಿ :
ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತ ಆಶ್ರಯದೊಂದಿಗೆ ನವೆಂಬರ್ 18 ರಿಂದ 20 ರವರೆಗೆ ನಗರದಲ್ಲಿ 63 ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಫಲಪುಷ್ಪ ಪ್ರದರ್ಶನವನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸುವರು. ಪ್ರದರ್ಶನದಲ್ಲಿ ಪ್ರಗತಿ ಪರ ರೈತರು ಬೆಳೆದ ವಿಶೇಷ ಗುಣಮಟ್ಟ ಹೊಂದಿರುವ ತರಕಾರಿ, ಹಣ್ಣು, ಹೂವು, ಸಾಂಬಾರು ಹಾಗೂ ಪ್ಲ್ಯಾಂಟೆಶನ್ ಬೆಳೆಗಳನ್ನು ಪ್ರದರ್ಶಿಸಲಾಗುತ್ತದೆ.

ಸಾರ್ವಜನಿಕರಿಗಾಗಿ ಹೂವಿನಿಂದ ವಿವಿಧ ಅಲಂಕೃತ ಕಲಾಕೃತಿಗಳು, ಉಸುಕಿನ ಕಲೆ ಗಾಜಿನ ಕಲೆ, ಹೂವು ಜೋಡಣೆ, ಕುಂಡಗಳ ಜೋಡಣೆ, ವಿದೇಶ ಹೂವುಗಳ ಪ್ರದರ್ಶನ, ಬೋನ್ಸಾಯ ಪ್ರದರ್ಶನ, ಕಟ್ ಹೂವುಗಳ ಪ್ರದರ್ಶನ, ತರಕಾರಿ/ಹಣ್ಣು ಕೆತ್ತನೆ ಪ್ರದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಫಲಪುಷ್ಪ ಪ್ರದರ್ಶನದ ದಿನಗಳಂದು ಸಂಜೆ 6.30 ರಿಂದ 8 ಗಂಟೆಯ ವರೆಗೆ ಆಯೋಜಿಸಲಾಗಿದೆ. ನ. 18 ರಂದು ಬೆಳಿಗ್ಗೆ 9 ಗಂಟೆಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದು. ಫಲಪುಷ್ಪ ಪ್ರದರ್ಶನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಸಾರ್ವಜನಿಕರಿಗೆ ಉಚಿತವಾಗಿ ವಿಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಫಲಪುಷ್ಪ ಪ್ರದರ್ಶದಲ್ಲಿ 25 ಕ್ಕು ಹೆಚ್ಚು ಮಳಿಗೆಗಳಿಗೆ ಹಾಗೂ ನರ್ಸರಿಗಳಿಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲ ಸಾರ್ವಜನಿಕರು/ ರೈತ ಬಾಂಧವರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0831-2451422 ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ