Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಟಕಾ ಬರೆಯುತ್ತಿದ್ದಾಗಲೆ ರೆಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದ ಸಂಜಯ ಪಾಟೀಲ ಬೆಂಬಲಿಗ ಗ್ರಾಮೀಣ ಕ್ಷೇತ್ರದಲ್ಲಿ ಗ್ಯಾಂಬ್ಲಿಂಗ್ ಹೆಚ್ಚಾಗುತ್ತಿದೆ ಎಂದು ನಿನ್ನೆಯಷ್ಟೆ ಆರೋಪಿಸಿದ್ದ ಮಾಜಿ ಶಾಸಕ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಟಕಾ, ಗ್ಯಾಂಬ್ಲಿಂಗ್ ಹೆಚ್ಚಾಗುತ್ತಿದ್ದು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ ಮರುದಿನವೇ ಮಟಕಾ ಬರೆಯುತ್ತಿದ್ದ ಸಂಜಯ ಪಾಟೀಲ ಬೆಂಬಲಿಗ ರೆಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬಡಸ್ ಕೆಎಚ್ ಲಕ್ಷ್ಮೀ ಗಲ್ಲಿಯ ಪರುಶುರಾಮ ಅರ್ಜುನ ಸುತಾರ (39) ಗಜವತಿ - ಕುಕಡೊಳ್ಳಿ ರಸ್ತೆಯಲ್ಲಿ ಓಸಿ ಚೀಟಿ ಬರೆಯುತ್ತಿರುವ ಸಂದರ್ಭದಲ್ಲೇ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಆತನಿಂದ 3 ಓಸಿ ಚೀಟ್, 500 ರೂ. ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆತನ ಬಲಗೈ ಮೇಲೆ ಓಂ ಚಿಹ್ನೆ ಮತ್ತು ಎಡಗೈ ಮೇಲೆ ದಾದಾ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಫೋಟೋ ಟ್ಯಾಟೂ ಇದೆ.

ಪಿಎಸ್ಐ ಅವಿನಾಶ ಯರಗೊಪ್ಪ, ಸಿಬ್ಬಂದಿ ಬಾಬಣ್ಣವರ್, ಪ್ರೀತಮ್ ಕೊಚೇರಿ, ಬಿ.ಸಿ. ಗುನ್ನಗೋಳ ಕಾರ್ಯಾಚರಣೆ ನಡೆಸಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ಯಾಂಬ್ಲಿಗ್ ಹೆಚ್ಚಾಗಿದ್ದು ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸಂಜಯ ಪಾಟೀಲ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು. ವಿಪರ್ಯಾಸವೆಂದರೆ ಮರುದಿನವೇ ಸಂಜಯ ಪಾಟೀಲ ಬೆಂಬಲಿಗನೇ ಮಟಕಾ ಬರೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ