Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

1.26 ಕೋಟಿಗೆ ಗಣೇಶ ಲಡ್ಡು ಹರಾಜು !

 

ಹೈದರಾಬಾದ್‌:
ಜನಪ್ರಿಯ ಬಂಡ್ಲಗುಡ ಗಣೇಶ ಲಡ್ಡು ಈ ಸಲ ಬರೋಬ್ಬರಿ ₹1.26 ಕೋಟಿಗೆ ಹರಾಜಾಗಿದೆ. ಈ ಮೂಲಕ ಅತಿ ದುಬಾರಿ ಲಡ್ಡು ಎನ್ನುವ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

ಸೆ.28ರಂದು ರಿಚ್‌ಮಂಡ್‌ ವಿಲ್ಲಾಸ್‌ನಲ್ಲಿ ಹರಾಜು ಪ್ರಕ್ರಿಯೆ ನಡೆದಿದ್ದು, ಕೀರ್ತಿ ರಿಚ್‌ಮಂಡ್‌ ವಿಲ್ಲಾಸ್‌ನ ನಿವಾಸಿಗಳೇ ಲಡ್ಡುವನ್ನು ಖರೀದಿ ಮಾಡಿದ್ದಾರೆ.

ಕಳೆದ ವರ್ಷದ ಹರಾಜಿನಲ್ಲಿ ಬಂಡ್ಲಗುಡ ಲಡ್ಡು ₹60.08 ಲಕ್ಷಕ್ಕೆ ಮಾರಾಟವಾಗಿತ್ತು. ಈ ಬಾರಿ ದುಪ್ಪಟ್ಟು ಬೆಲೆಗೆ ಹರಾಜಾಗಿದೆ. ಈ ಲಡ್ಡು 12 ಕೆ.ಜಿ ಇರುತ್ತದೆ.

ಇದರ ಜೊತೆಗೆ ಪ್ರಸಿದ್ಧ ಬಾಲಾಪುರದ (ತೆಲಂಗಾಣ) ಗಣಪತಿ ಲಡ್ಡು ₹27 ಲಕ್ಷಕ್ಕೆ ಮಾರಾಟವಾಗಿದೆ. ಇದು 21 ಕೆ.ಜಿಯ ಲಡ್ಡುವಾಗಿದೆ. ಇದನ್ನು ದಸರಿ ದಯಾನಂದ ರೆಡ್ಡಿ ಎನ್ನುವವರು ಖರೀದಿ ಮಾಡಿದ್ದಾರೆ.

ಈ ಮೂಲಕ ಎರಡೂ ಪ್ರದೇಶದ ಲಡ್ಡು ಹರಾಜು ಗಮನಾರ್ಹ ದಾಖಲೆಗಳನ್ನು ನಿರ್ಮಿಸಿವೆ.

 

ಪ್ರತಿ ವರ್ಷ ಗಣೇಶ ಚತುರ್ಥಿಯ ಪ್ರಯುಕ್ತ ರಿಚ್‌ಮಂಡ್‌ ವಿಲ್ಲಾಸ್‌ ನಿವಾಸಿಗಳು ಗಣಪತಿಯ ಕೈನಲ್ಲಿ ಇರಿಸಿದ್ದ ಲಡ್ಡುವಿನ ಹರಾಜು ಪ್ರಕ್ರಿಯೆ ನಡೆಸುತ್ತಾರೆ. 1994ರಿಂದ ಈ ಪದ್ದತಿ ಜಾರಿಯಲ್ಲಿದೆ. ಹರಾಜಿನಿಂದ ಬಂದ ಹಣವನ್ನು ಗಣೇಶ ಉತ್ಸವ ಸಮಿತಿಯು ವಿವಿಧ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿರುವ ಸ್ವಯಂಸೇವಾ ಸಂಸ್ಥೆಗಳಿಗೆ ನೀಡಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ