ಗಣಿಕೊಪ್ಪ :ಕಿತ್ತೂರು : ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಮಕ್ಕಳಿಗೆ ಸಿಹಿ ಭೋಜನದ ಜೊತೆಗೆ ಪುಸ್ತಕ, ಪೆನ್ನು ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಪ್ರಧಾನ ಗುರು ಎಂ. ಎ. ನದಾಫ್, ಸಹ ಶಿಕ್ಷಕರಾದ ಭರಮಣ್ಣವರ, ಸುನಿತಾ ಬನಸಿ, ಪ್ರೇಮಾ ಗಾಬಿ, ವೀಣಾ ಹಿರೇಮಠ, ಶಾಸಕರ ಅಭಿಮಾನಿ ಬಳಗ, ಎಸ್ ಡಿ ಎಂ ಸಿ ಸದಸ್ಯರು, ಹಳೆಯ ವಿದ್ಯಾರ್ಥಿ ಬಳಗ, ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.