Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

GBS ಉಲ್ಬಣ : ಅರೆಬರೆ ಬೆಂದ ಕೋಳಿಯ ಖಾದ್ಯ ಸೇವಿಸದಿರಿ

 

ಅಮರಾವತಿ, ಪುಣೆ: ದೇಹದ ಪ್ರತಿರೋಧ ವ್ಯವಸ್ಥೆಯು
ನರಮಂಡಲದ ಮೇಲೆ ದಾಳಿ ಮಾಡುವ ವಿಚಿತ್ರ ಕಾಯಿಲೆ ಗೀಲನ್ ಬಾ ಸಿಂಡೋಮ್‌ಗೆ (GBS) ಆಂಧ್ರದಲ್ಲಿ ಮಹಿಳೆ ಹಾಗೂ ಒಬ್ಬ ಬಾಲಕ ಮೃತಪಟ್ಟಿದ್ದಾರೆ.

'ಗುಂಟೂರಿನಲ್ಲಿ ಕಮಲಮ್ಮ ಎಂಬುವವರು ಹಾಗೂ ಶ್ರೀಕಾಕುಲಮ್‌ನಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಸದ್ಯ 17 ಸಕ್ರೀಯ ಪ್ರಕರಣಗಳಿವೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ. ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಇಬ್ಬರಲ್ಲಿ ಈ ಸೋಂಕು ಕಂಡುಬಂದಿದೆ. ಇದೊಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದ್ದು. ಏಕಾಏಕಿ ಎದುರಾಗಿಲ್ಲ' ಎಂದು ಆರೋಗ್ಯ ಸಚಿವ ಸತ್ಯ ಕುಮಾ‌ರ್ ಯಾದವ್ ತಿಳಿಸಿದ್ದಾರೆ.

'2024ರಲ್ಲಿ ಒಟ್ಟು 267 ಜಿಬಿಎಸ್ ಪ್ರಕರಣಗಳು ಕಂಡುಬಂದಿದ್ದವು. ಇದರಲ್ಲಿ ವರ್ಷದ ಮೊದಲಾರ್ಧದಲ್ಲಿ 141 ಹಾಗೂ ದ್ವಿತೀಯಾರ್ಧದಲ್ಲಿ 126 ಪ್ರಕರಣಗಳು ದಾಖಲಾಗಿದ್ದವು. ಅಂದರೆ ತಿಂಗಳ ಸರಾಸರಿ 25 ಮೀರಿಲ್ಲ. ಈ ಸೋಂಕಿಗೆ ಒಳಗಾದವರು ಸಾಮಾನ್ಯ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಕೆಲವೇ ಕೆಲವು ಗಂಭೀರ ಪ್ರಕರಣಗಳಿಗೆ ಇಮ್ಯುನೊಗ್ಲಾಬ್ಯುಲಿನ್ ಚುಚ್ಚುಮದ್ದು ಪಡೆಯಬೇಕು. ಈ ಸೋಂಕಿನಿಂದ ದೇಹದ ರೋಗನಿರೋಧಕ ವ್ಯವಸ್ಥೆಯು ತಪ್ಪಾಗಿ ನರವ್ಯೂಹದ ಮೇಲೆ ದಾಳಿ ನಡೆಸುತ್ತದೆ. ಇದರಿಂದ ಮಾಂಸಖಂಡದಲ್ಲಿ ದುರ್ಬಲತೆ, ಮರಗಟ್ಟುವಿಕೆ ಹಾಗೂ ಜುಮ್ಮೆನಿಸುವಿಕೆಯ ಅನುಭವವಾಗಲಿದೆ.

ಮಹಾರಾಷ್ಟ್ರದಲ್ಲಿ GBS ಉಲ್ಬಣಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅರೆಬರೆ ಬೆಂದ ಕೋಳಿಯ ಖಾದ್ಯವನ್ನು ಜನರು ಸೇವಿಸಬಾರದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮನವಿ ಮಾಡಿಕೊಂಡಿದ್ದಾರೆ.

'ಪುಣೆಯ ಖಡಕ್‌ವಾಸ್ಲಾ ಡ್ಯಾಂ ಬಳಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಇದು ಕಲುಷಿತ ನೀರಿನಿಂದ ಹರಡಿದೆ ಎಂದು ಕೆಲವರು ಹೇಳಿದ್ದರು. ಇನ್ನೂ ಕೆಲವರು ಕೋಳಿ ಖಾದ್ಯ ಸೇವನೆಯಿಂದ ಹರಡುತ್ತಿದೆ ಎಂದೆನ್ನುತ್ತಿದ್ದಾರೆ. ಈ ಕುರಿತು ಕೂಲಂಕಷವಾಗಿ ತಪಾಸಣೆ ನಡೆಸಲಾಗಿದ್ದು, ಕೋಳಿಗಳನ್ನು ಕೊಲ್ಲುವ ಅವಶ್ಯಕತೆ ಇಲ್ಲ. ಆದರೆ ಕೋಳಿ ಮಾಂಸ ತಿನ್ನುವ ಅಭ್ಯಾಸ ಇರುವವರು, ಸಮರ್ಪಕವಾಗಿ ಬೇಯಿಸಿ ತಿನ್ನುವುದನ್ನು ರೂಢಿಸಿಕೊಳ್ಳಬೇಕು' ಎಂದಿದ್ದಾರೆ.

ನೀರು ಮತ್ತು ಆಹಾರದಲ್ಲಿ ಬೆಳೆಯುವ ಕ್ಯಾಂಪಿಲೋಬ್ಯಾಕ್ಟ‌ರ್ ಜಿಜುನಿ ಎಂಬ ಬ್ಯಾಕ್ಟಿರಿಯಾ ಈ ಸೋಂಕು ಹರಡಲು ಕಾರಣ. ಹೀಗಾಗಿ ಆಹಾರವನ್ನು ಚೆನ್ನಾಗಿ ಬೇಯಿಸಿದ ನಂತರವೇ ತಿನ್ನಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಶನಿವಾರ ಮತ್ತೊಂದು ಹೊಸ ಪ್ರಕರಣ ಪತ್ತೆಯಾಗಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 208ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ