Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾಲಕಿಗೆ ಲೈಂಗಿಕ ಕಿರುಕುಳ, ಎಸ್‌ಐ ಬಂಧನ

ಭಟ್ಕಳ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಗರ ಠಾಣೆ ಪೊಲೀಸರು ಶನಿವಾರ ತಡರಾತ್ರಿ ಹೊನ್ನಾವರ ತಾಲ್ಲೂಕು ಮಂಕಿ ಪೊಲೀಸ್‌ ಠಾಣೆಯ ಎಸ್‌ಐ ಅಭಿನಂದನ ಎಸ್. ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಮೂಲದ ಅಭಿನಂದನ ನಾಲ್ಕು ತಿಂಗಳ ಹಿಂದೆ ಮಂಕಿ ಠಾಣೆಯ ಎಸ್‌ಐ ಆಗಿ ನೇಮಕಗೊಂಡಿದ್ದರು. ಸದ್ಯ ಭಟ್ಕಳ ನಗರ ವ್ಯಾಪ್ತಿಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.

'ಜಿಲ್ಲೆಯ ಗ್ರಾಮೀಣ ಪ್ರದೇಶವೊಂದರ ಬಾಲಕಿಯನ್ನು ಭಟ್ಕಳಕ್ಕೆ ಕರೆಯಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾಗಿ ಭಟ್ಕಳ ನಗರ ಠಾಣೆಗೆ ದೂರು ಬಂದಿತ್ತು. ಎಸ್‌ಐ ವಿರುದ್ಧ ಪೋಟ್ರೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಬಂಧಿಸಲಾಗಿದೆ' ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಪ್ರಾಪ್ತ ಬಾಲಕಿ ನೀಡಿದ ದೂರಿನನ್ವಯ ಆರೋಪಿಯಾಗಿರುವ ಪಿ.ಎಸ್.ಐ. ಬಾಲಕಿಯನ್ನು ದೂರವಾಣಿಯಲ್ಲಿ ಸಂಪರ್ಕಿಸಿದ್ದಲ್ಲದೇ, ಚಾಟ್ ಮಾಡುತ್ತಿದ್ದ ಎನ್ನಲಾಗಿದೆ. ಹಣಕಾಸಿನ ನೆರವನ್ನು ಸಹ ನೀಡುವ ಮೂಲಕ ಆಕೆಯ ವಿಶ್ವಾಸ ಗಳಿಸುವ ಮೂಲಕ ಆತ್ಮೀಯತೆಯನ್ನು ಬೆಳೆಸಿಕೊಂಡಿದ್ದಾನೆ. ನಂತರ ಮೇ.31 ರಂದು ಅಪ್ಸರಕೊಂಡದಲ್ಲಿ ತನ್ನ ತಂಗಿಯ ಮಗುವಿನ ಹುಟ್ಟು ಹಬ್ಬಕ್ಕೆ ಆಕೆಯನ್ನು ಕರೆಯಿಸಿಕೊಂಡು ಅಂದೇ ಭಟ್ಕಳದ ಬಸ್ ನಿಲ್ದಾಣದ ಸಮೀಪ ಇರುವ ಖಾಸಗಿ ಲಾಡ್ಜ್ ಒಂದಕ್ಕೆ ಕರೆದುಕೊಂಡು ಬಂದು ಕೊಠಡಿಯಲ್ಲಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಭಟ್ಕಳ ನಗರ ಪೊಲೀಸ್ ಇನ್ಸಪೆಕ್ಟರ್ ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?ಹಾರ್ಮುಜ್ ಜಲಸಂಧಿ ‘ಅಮೆರಿಕದ ಹೊಸ ಭೂಪ್ರದೇಶ’ ಎಂದು ಘೋಷಿಸಿ ನಕ್ಷೆ ಹಂಚಿಕೊಂಡ ಟ್ರಂಪ್‌ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಜಾವೆಲಿನ್ ಎಸೆತದಲ್ಲಿ  ಜಿ. ಎ. ಹೈಸ್ಕೂಲ್ ವಿದ್ಯಾರ್ಥಿ ವಿಶಾಲ್ ರಾಠೋಡ ದಾಖಲೆ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರ ಹೊಡೆದಾಟ ; ರೀಲ್ಸ್‌ಗಾಗಿ ನಡೆಯಿತೇ ಜಗಳ ?ವಿಮಲ್ ಎಲೈಚಿ ಜಾಹೀರಾತು : ಅಜಯ ದೇವಗನ್, ಶಾರುಖ್ ಖಾನ್, ಟೈಗರ್ ಶ್ರಾಫ್‌ಗೆ ಎಫ್‌ಡಿಎ ನೋಟಿಸ್