Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಸಿ ಸರ್ಕಾರ ಅಧಿಕೃತ ಆದೇಶ

Advertisement
ಬೆಂಗಳೂರು : 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಒಟ್ಟು 60 ದಿನಗಳು ವಿನಾಯಿತಿ ನೀಡಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡಿದ್ದ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶ ಸಿಗಲಿದೆ.

ರಾಜ್ಯದಲ್ಲಿ ಮಗುವನ್ನು 1 ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ಕಡ್ಡಾಯವಾಗಿ ಪೂರ್ಣಗೊಳ್ಳಬೇಕಿತ್ತು. ಈ ಬಾರಿ ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ 2 ತಿಂಗಳ ವಿನಾಯಿತಿ ನೀಡುವುದಾಗಿ ಘೋಷಣೆ ಮಾಡಿತ್ತು. ಈಗ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಆದೇಶದಲ್ಲಿ ಈ ವರ್ಷಕ್ಕೆ ಮಾತ್ರ ಅನ್ವಯ ಎಂಬ ನಿಯಮ ವಿಧಿಸಲಾಗಿದೆ.

ಹಳೆಯ ನಿಮಯದ ಪ್ರಕಾರ, 2020 ಮೇ 31ರೊಳಗೆ ಜನಿಸಿದ ಮಕ್ಕಳಿಗೆ ಮಾತ್ರ ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಗೆ ಅವಕಾಶವಿತ್ತು. ಈಗ ಹೊಸ ನಿಯಮದ ಪ್ರಕಾರ, 2020 ಜುಲೈ 30ರೊಳಗೆ ಜನಿಸಿದ ಮಕ್ಕಳಿಗೂ ದಾಖಲಾತಿ ಸಿಗಲಿದೆ. ಇದಕ್ಕೆ ಸಂಬಂಧಿಸಿದಂತೆ SATS ತಂತ್ರಾಂಶದಲ್ಲಿಯೂ ಸೂಕ್ತ ಬದಲಾವಣೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್‌ 1 ರಿಂದ ಗರಿಷ್ಠ60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಈ ಬಗ್ಗೆ ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಟ್ವೀಟ್‌ ಮಾಡಿದ್ದು, ” 2026 – 27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ 1ನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್‌ 1 ರಿಂದ ಗರಿಷ್ಠ 60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದ ಮಗುವಿನ ಜನ್ಮ ದಿನಾಂಕವು ಜೂನ್ 1ರಿಂದ ಮುಂದಿನ 60 ದಿನಗಳ ಒಳಗಿದ್ದರೆ (ಜುಲೈ 30ರ ವರೆಗೆ), ಅಂತಹ ಮಕ್ಕಳನ್ನು 1ನೇ ತರಗತಿಗೆ ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಿದಂತಾಗಿದೆ. ಪೋಷಕರು ಸಲ್ಲಿಸಿದ ಮನವಿಗಳನ್ನು ಪುರಸ್ಕರಿಸಿ, ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ಕಲಂ 20ರ ಅಡಿಯಲ್ಲಿ ಈ ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ ” ಎಂದು ಅದು ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!