Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿಯಿಂದ ಭರ್ಜರಿ ಕೊಡುಗೆ

 

ಭೋಪಾಲ:
ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್‌ ನಡುವೆ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸುವ ಪೈಪೋಟಿ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಪ್ರಕಟಿಸಿದ್ದಾರೆ.

ಈಗ ನಡೆಯುತ್ತಿರುವ ಶ್ರಾವಣ ಮಾಸದ ಪ್ರಯುಕ್ತ ‘ಲಾಡ್ಲಿ ಬೆಹೆನಾ’ ಯೋಜನೆಯಡಿ ಮಹಿಳೆಯರಿಗೆ 1250 ರು. ನೀಡಲಾಗುವುದು (ಈ ಹಿಂದೆ ಮಾಸಿಕ 1000 ರು. ಇತ್ತು). ಅಕ್ಟೋಬರ್‌ ತಿಂಗಳಿನಿಂದ ಇದನ್ನು ಶಾಶ್ವತವಾಗಿ 1250 ರು.ಗೆ ಏರಿಸಲಾಗುವುದು. ಶ್ರಾವಣ ಮಾಸದಲ್ಲಿ 450 ರು.ಗೆ ಎಲ್‌ಪಿಜಿ ಸಿಲಿಂಡರ್‌ ನೀಡಲಾಗುವುದು. ಮುಂದೆ ಇದೇ ದರಕ್ಕೆ ಸಿಲಿಂಡರ್‌ ನೀಡಲು ಶಾಶ್ವತ ವ್ಯವಸ್ಥೆ ಮಾಡಲಾಗುವುದು. ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗಿರುವ ಮೀಸಲಾತಿಯನ್ನು ಈಗಿನ ಶೇ.30ರಿಂದ ಶೇ.35ಕ್ಕೆ ಏರಿಸಲಾಗುವುದು ಎಂದು ಶಿವರಾಜ ಸಿಂಗ್‌ ಪ್ರಕಟಿಸಿದ್ದಾರೆ.

 

ಕಾಂಗ್ರೆಸ್‌ ಪಕ್ಷ ಈಗಾಗಲೇ ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ತಾನು ಗೆದ್ದರೆ ಹಲವಾರು ಉಚಿತ ಗ್ಯಾರಂಟಿಗಳನ್ನು ನೀಡುವುದಾಗಿ ಘೋಷಿಸಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಸರ್ಕಾರ ಈಗಿನಿಂದಲೇ ಹಲವು ಕೊಡುಗೆಗಳನ್ನು ಘೋಷಿಸಿ ಜಾರಿಗೊಳಿಸುತ್ತಿದೆ. ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ 14 ಲಕ್ಷ ಹೊಸ ಮತದಾರರು ನೋಂದಾಯಿಸಿಕೊಂಡಿದ್ದು, ಅವರಲ್ಲಿ 7.07 ಲಕ್ಷ ಮಹಿಳೆಯರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ