Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

9 ಸಾವಿರ ಸಣ್ಣ ವರ್ತಕರ ಜಿಎಸ್‌ಟಿ ಬಾಕಿ ಮನ್ನಾ: ಸಿದ್ದರಾಮಯ್ಯ

ಬೆಂಗಳೂರು: ನೋಟಿಸ್‌ ನೀಡಲಾಗಿರುವ ಒಂಬತ್ತು

ಸಾವಿರ ಸಣ್ಣ ವರ್ತಕರ ಹಳೆಯ ಜಿಎಸ್‌ಟಿ ಬಾಕಿ ಮನ್ನಾ ಮಾಡಲಾಗುವುದು. ಆದರೆ, ಎಲ್ಲರೂ ಇನ್ನುಮುಂದೆ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಣ್ಣ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯ ಕುರಿತು ಬುಧವಾರ ನಡೆದ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್‌ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ ಎಂದು ವರ್ತಕರು ದೂರು ಸಲ್ಲಿಸಿದ್ದಾರೆ. ನೋಟಿಸ್‌ ನೀಡುವುದು ತಪ್ಪಲ್ಲ. ಆದರೆ, ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಯುಪಿಐ ಅಡಿ ₹40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೋಟಿಸ್‌ ನೀಡಲಾಗಿದೆ. ಆರಂಭದಲ್ಲಿ ನೋಂದಣಿ ಮಾಡುವಂತೆ ನೋಟಿಸ್‌ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್‌ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು ಎಂದರು.

ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ ಒಂಬತ್ತು ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಯಲ್ಲಿ 18 ಸಾವಿರ ನೋಟಿಸ್‌ ಜಾರಿಗೊಳಿಸಲಾಗಿದೆ. ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ ಎಂದು ಭರವಸೆ ನೀಡಿದರು.

ಜಿಎಸ್‌ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ 50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್‌ಟಿ
ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು ಎಂದು ಹೇಳಿದರು.

ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಾಗೂ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ನೀಡಿದ ವಿವರಗಳ ಮುಖ್ಯಾಂಶಗಳು:

• ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

• ʻಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.
• ʻಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
• ʻಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕುʼ.
• ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು.
• ಯುಪಿಐ ಅಡಿ ರೂ. 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.
• ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.

• ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

• ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

• ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

• ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ.

• ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು.

• ವ್ಯಾಪಾರ ವಹಿವಾಟು ಬಂದ್ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

• Various trade bodies were present including FKCCI. Our government is for poor people in order to increase the purchasing power we carry different programs.

• Notices have been issued for transactions more than 40 lakhs turnover & the officers have been instructed to collect tax on dealers dealing with the exempted goods such as Milk, flowers, vegetable & Meat.

• Only 9000 Notices have been issued and spread over 2-3 years which comes around 18,000 Notices. This dealears having turnover more than 40 Lakhs should register. Subject to registration the previous arrears will not be pursued.

• Department is instructed to orgsnise workshop trade bodies. The trade bodies and street vendor assoicaitons have accepted the Chief Minister's interaction and voluntarily promised to withdraw the proposed protest.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ